ಮಂಗಳೂರು ವಿವಿ ಕಾಲೇಜು: ಮೇ 19 ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಹಾಗೂ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗ ಮತ್ತು ಕನ್ನಡ ಸಂಘದ ಸಹಯೋಗದಲ್ಲಿ ʼಅಂಬಿಗರ ಚೌಡಯ್ಯ: ವಚನ ಮೀಮಾಂಸೆʼ ಎಂಬ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮೇ 19 ರಂದು ಆಯೋಜಿಸಲಾಗಿದೆ. 


ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಆರ್. ಜೈನ್ ಬೆಳಗ್ಗೆ 10.30 ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಎಸ್ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಮದರಾಸು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಅಧ್ಯಕ್ಷ ಡಾ. ತಮಿಳ್ ಸೆಲ್ವಿ ಆಶಯ ನುಡಿಗಳನ್ನು ಆಡಲಿದ್ದು, ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರ ಗೌರವ ಉಪಸ್ಥಿತಿಯಿರಲಿದೆ. 


ಮೊದಲ ಗೋಷ್ಠಿಯಲ್ಲಿ ʼಅಂಬಿಗರ ಚೌಡಯ್ಯನವರ ವಚನಗಳಲ್ಲಿ ಕಾಯಕದ ಪರಿಕಲ್ಪನೆʼ ಕುರಿತು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಹಳೆಮನೆ ಮಾತನಾಡಲಿದ್ದು, ಎರಡನೇ ಗೋಷ್ಠಿಯಲ್ಲಿ ʼಅಂಬಿಗರ ಚೌಡಯ್ಯನವರ ವಚನಗಳಲ್ಲಿ ಸಾಮಾಜಿಕ ಪರಿಕಲ್ಪನೆʼ ಕುರಿತು ಕಾಸರಗೋಡಿನ ಸರಕಾರಿ ಕಾಲೇಜಿನ ಸ್ನಾತಕೋತ್ತರ ಕನ್ನಡ ಅಧ್ಯನ ಕೇಂದ್ರದ ಸಹಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲದಮೂಲೆ ಮಾತನಾಡಲಿದ್ದಾರೆ. 


ʼವಿಕಾಸʼದ ಅಧ್ಯಕ್ಷೆ ಡಾ. ನಾಗವೇಣಿ ಮಂಚಿ, ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಹರೀಶ್ ಟಿ ಜಿ ಸಮನ್ವಯಕಾರರಾಗಿರಲಿದ್ದಾರೆ. ಎಸ್.ಡಿ.ಎಂ ಕಾನೂನು ಕಾಲೇಜಿನ ಕಾನೂನು ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಮಠದಮೂಲೆ, ವಿವಿ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಲತೇಶ್ ಸಾಂತ ವಿದ್ಯಾರ್ಥಿ ಪ್ರತಿಕ್ರಿಯೆ ನೀಡಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಅಂಬಿಗರ ಚೌಡಯ್ಯ ಅಧ್ಯತನ ಪೀಠದ ಸಂಯೋಜಕ ಪ್ರೊ. ಸೋಮಣ್ಣ ಅಧ್ಯಕ್ಷತೆ ವಹಿಸಲಿದ್ದು, ಅಭಿಜಾತ ಕನ್ನಡ ಸಂಶೋಧನಾ ಪತ್ರಿಕೆಯ ಡಾ. ಕೊಟ್ರಸ್ವಾಮಿ ಎ.ಎಂ.ಎಂ ಸಮಾರೋಪ ಭಾಷಣ ಮಾಡಲಿದ್ದಾರೆ. ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತು ಉಪನ್ಯಾಸಕರು ಪ್ರಬಂಧ ಮಂಡನೆ ಮಾಡಲಿದ್ದಾರೆ, ಎಂದು ಪ್ರಕಟಣೆ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top