ಪ್ರಧಾನಿ ನರೇಂದ್ರ ಮೋದಿ ಅವರಿಂದ ಮತದಾನ ಜಾಗೃತಿ ಸಂದೇಶ

Upayuktha
0

 


ಮಂಗಳೂರು: ಕರುನಾಡ ಕದನ- ಪ್ರಜಾಪ್ರಭುತ್ವದ ಮತದಾನ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ನಾಡಿನ ಜನತೆಯನ್ನು ಉದ್ದೇಶಿಸಿ ಮತದಾನ ಜಾಗೃತಿಯ ಸಂದೇಶ ನೀಡಿದ್ದಾರೆ. ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ಕುರಿತು ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. "ಪ್ರತಿಯೊಬ್ಬ ಕನ್ನಡಿಗರ ಕನಸು ನನ್ನ ಸ್ವಂತ ಕನಸು, ನಿಮ್ಮ ಆಶಯ ನನ್ನ ಆಶಯ" ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಓದುಗರಿಗಾಗಿ ಪ್ರಧಾನಿ ಸಂದೇಶದ ವಿಡಿಯೋ ತುಣುಕನ್ನು ಇಲ್ಲಿ ನೀಡುತ್ತಿದ್ದೇವೆ.



ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಪ್ರಚಾರವು ಮೇ 9 ಸೋಮವಾರ ಸಂಜೆ 5 ಗಂಟೆಗೆ ಕೊನೆಗೊಂಡಿದೆ.

ರಾಜ್ಯದಲ್ಲಿ ಈ ಬಾರಿ 5.24 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಈ ಪೈಕಿ 2.63 ಕೋಟಿ ಪುರುಷರು ಮತ್ತು 2.60 ಕೋಟಿ ಮಹಿಳೆಯರಿದ್ದಾರೆ. 100 ವರ್ಷ ದಾಟಿರುವ 16,976 ಮತದಾರರಿದ್ದರೆ, 18ರಿಂದ 19 ವರ್ಷದ ಯುವ ಮತದಾರರ ಸಂಖ್ಯೆ 9.58 ಲಕ್ಷವಾಗಿದ್ದರೆ. 80 ವರ್ಷ ದಾಟಿದವರ ಸಂಖ್ಯೆಯೂ (12.15 ಲಕ್ಷ) ಗಣನೀಯ ಪ್ರಮಾಣದಲ್ಲಿದೆ. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top