ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ 1994-1995 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Upayuktha
0

ಪಾಣಾಜೆ: ಪಾಣಾಜೆ ಸುಬೋಧ ಪ್ರೌಢಶಾಲೆಯ  1994-95 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳೇ ಆಯೋಜಿಸಿದ ಸ್ನೇಹ ಸಮ್ಮಿಲನ  ಕಾರ್ಯಕ್ರಮವು ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಉಪೇಂದ್ರ ಬಲ್ಯಾಯ ದೇವಸ್ಯ, ಇವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 30 ರಂದು ಸಂಭ್ರಮ ಸಡಗರದಿಂದ ಶಾಲೆಯಲ್ಲಿ ಜರುಗಿತು.

   

ದೇಶದ ನಾನಾ ಕಡೆಗಳಲ್ಲಿ ತಮ್ಮ ತಮ್ಮ ವೃತ್ತಿಗಳಲ್ಲಿ ನಿರತರಾಗಿರುವ  ಹಿರಿಯ ವಿದ್ಯಾರ್ಥಿಗಳು, ತಾವು ವಿದ್ಯಾರ್ಜನೆ ಮಾಡಿದ ಶಾಲೆಯಲ್ಲಿ ಒಟ್ಟಿಗೆ ಸೇರಿ ತಮಗೆ ಕಲಿಸಿದ ಗುರುಗಳನ್ನು ಸನ್ಮಾನಿಸಿ ಅವರ ಹಿತವಚನಗಳನ್ನು ಕೇಳಿ ಖುಷಿ ಪಟ್ಟರು.

  

ಸಮಾರಂಭದ ಅಧ್ಯಕ್ಷರು, ಸಂಚಾಲಕರು ಮತ್ತು ಶಿಕ್ಷಕರು ಜೊತೆಯಲ್ಲಿ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

     

ತಮ್ಮ ಗುರುಗಳಾದ ಪಿಲಿಂಗಲ್ಲು ಕೃಷ್ಣ ಭಟ್, ಮೊಳಕ್ಕಾಲು ಶ್ರೀಕೃಷ್ಣ ಭಟ್, ಸುಬ್ರಹ್ಮಣ್ಯ ಶಾಸ್ತ್ರಿ, ನಾರಾಯಣ ಎಸ್ ಕೆ, ಪುರಂದರ ಎಂ ಜಿ, ಪ್ರತಿಭಾ ಬೊಳ್ಳಿಂಬಳ, ಲಲಿತಾ ಹೆಗ್ಗಡೆ ಮತ್ತು ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ  ಉಪೇಂದ್ರ ಬಲ್ಯಾಯ ಹಾಗೂ ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್, ಇವರುಗಳನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಗುರುಗಳು ಹಿತವಚನಗಳನ್ನು ಹೇಳಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು, ಹಿರಿಯ ವಿದ್ಯಾರ್ಥಿಗಳಾದ  ಸವಿತಾ, ಮಹೇಶ್, ಬಾಲಕೃಷ್ಣ ಭಟ್ ಖಂಡೇರಿ  ಶಾಲೆಯಲ್ಲಿ ಕಳೆದ ದಿನಗಳನ್ನು ನೆನೆಯುತ್ತಾ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ತಮ್ಮ ಶಿಕ್ಷಕರು ಮತ್ತು ಸಹಪಾಠಿಗಳೊಡನೆ ಸಂಭ್ರಮಿಸಿದರು.

 

ಶಾಲಾ ಸಂಚಾಲಕರು ಹಿರಿಯ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಕೃತ ಸ್ಥಿತಿಯನ್ನು ವಿವರಿಸಿ ಹಿರಿಯ ವಿದ್ಯಾರ್ಥಿಗಳ ಸರ್ವ ವಿಧದ ಸಹಕಾರವನ್ನು ಕೋರಿದರು.

    

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಭಂಡಾರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿಗಳಾದ ಸವಿತಾ, ಶೈಲಜಾ ಪ್ರಾರ್ಥಿಸಿ,  ಮಹೇಶ್ ವಂದಿಸಿದರು. ಹಿರಿಯ ವಿದ್ಯಾರ್ಥಿ ಬಾಲಕೃಷ್ಣ ಭಟ್ ಖಂಡೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ಬಿಬಿ ಕ್ರಿಯೇಶನ್ಸ್  ನ ಹರೀಶ್ ಮತ್ತು ಪ್ರದೀಪ್ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top