ಮಂಗಳೂರು: ಬಿಜೆಪಿ ಸರ್ಕಾರದಿಂದ ಮಾನವೀಯ ದೃಷ್ಟಿಯಿಂದ ಸರ್ಕಾರಿ ಕೆಲಸ ಪಡೆದುಕೊಂಡಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಪತ್ನಿಗೆ ಇದೀಗ ಕೆಲಸದಿಂದ ಕೊಕ್ ನೀಡಲಾಗಿದೆ.
ಕಳೆದ ವರ್ಷ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಕುಮಾರಿ ಎಂ. ಅವರಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022ರ ಸೆ. 29ರಂದು ಆದೇಶ ಹೊರಡಿಸಿದ್ದರು. ಇದೀಗ ಸರ್ಕಾರ ಬದಲಾಗಿದ್ದು, ನೂತನ ಕಾಂಗ್ರೆಸ್ ಸರ್ಕಾರ ನೆಟ್ಟಾರ್ ಪತ್ನಿಗೆ ಕೆಲಸದಿಂದ ಕೊಕ್ ಕೊಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ನೂತನ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕಾಂಗ್ರೆಸ್ ನ ಹೊಸ ಸರ್ಕಾರ ಬಂದ ತಕ್ಷಣ ನೆಟ್ಟಾರು ಪತ್ನಿ ನೂತನ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ