ಪುತ್ತೂರು: ಬಿಜೆಪಿ ನಾಯಕರ ಫೋಟೋಗಳಿಗೆ ಶ್ರದ್ಧಾಂಜಲಿ, ಚಪ್ಪಲಿ ಹಾರದ ಬ್ಯಾನರ್, ಇಬ್ಬರ ಬಂಧನ

Upayuktha
0

ಪುತ್ತೂರು: ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಎದುರು ನಡೆದಿದೆ.

ಹಿರಿಯ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವಿರುವ ಬ್ಯಾನರ್‌ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.

ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದ್ದು, ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

ಅರುಣ್ ಕುಮಾರ್ ಪುತ್ತಿಲ ಖಂಡನೆ

ಇದನ್ನು ಕಾಂಗ್ರೆಸ್ ಶಾಸಕ, ಬಿಜೆಪಿ ನಾಯಕರು ಮಾತ್ರವಲ್ಲ, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಖಂಡಿಸಿದ್ದಾರೆ. ಯಾರೋ ವಿಘ್ನ ಸಂತೋಷಿಗಳು ಸಂಘ ಹಾಗು ಬಿಜೆಪಿ ಪಕ್ಷದ ನಾಯಕರನ್ನು ನಿಂದಿಸುವುದು ಕಂಡು ಬಂದಿದೆ. ನಾವು ಇದನ್ನು ಬೆಂಬಲಿಸುವುದಿಲ್ಲ ಎಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

ಪುತ್ತೂರಿನಲ್ಲಿ ಚುನಾವಣೆ ವೇಳೆ ಜಿದ್ದಾಜಿದ್ದಿನ ಹೋರಾಟ ನಡೆದು ಫಲಿತಾಂಶ ಬಂದ ಬಳಿಕ ಪುತ್ತೂರಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿತು. ರಾಜ್ಯದಲ್ಲೂ ಸೋತಿತು. ಪುತ್ತೂರಿನಲ್ಲಿ ಸೋಲು ಕಾಣಲು ಡಿ.ವಿ.ಸದಾನಂದ ಗೌಡ ಮತ್ತು ನಳಿನ್ ಕುಮಾರ್ ಕಟೀಲ್ ಅವರೇ ಕಾರಣ ಎಂಬ ಆರೋಪ ವೈಯಕ್ತಿಕ ಟೀಕೆಗೆ ತಿರುಗಿತ್ತು. ಇದರ ಭಾಗವಾಗಿಯೇ ಪರಿಸ್ಥಿತಿಯ ದುರ್ಲಾಭ ಪಡೆದುಕೊಂಡ ಕಿಡಿಗೇಡಿಗಳು ಪುತ್ತೂರಿನಲ್ಲಿ ಬ್ಯಾನರ್ ಕಟ್ಟಿದ್ದಾರೆ.

ಇಬ್ಬರ ಬಂಧನ:
ಘಟನೆಗೆ ಸಂಬಂಧಪಟ್ಟಂತೆ ಪುತ್ತೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ನರಿಮೊಗರು ಗ್ರಾಮದ ಸಹೋದರರಾದ ವಿಶ್ವನಾಥ್ ಹಾಗೂ ಮಾಧವ ಎಂದು ಗುರುತಿಸಲಾಗಿದೆ. ಪುತ್ತೂರು ನಗರಸಭೆ ಆಯುಕ್ತ ಮಧು ಎಸ್. ಮನೋಹರ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top