2,000 ರೂ. ನೋಟು ಹಿಂಪಡೆದ ಆರ್‌ಬಿಐ

Upayuktha
0

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ, 2,000 ರೂ ಮುಖಬೆಲೆಯ ಬ್ಯಾಂಕ್ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ ಎಂದು ಹೇಳಿದೆ.

ಆದರೂ 2,000 ರೂ ಮುಖಬೆಲೆಯ ಬ್ಯಾಂಕ್ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯಲಿದೆ ಎಂದು ಹೇಳಿದೆ.

ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಗಳಿಗೆ ರೂ 2,000 ನೋಟುಗಳನ್ನು ಜಮಾ ಮಾಡಬಹುದು ಅಥವಾ ಯಾವುದೇ ಬ್ಯಾಂಕ್ ಶಾಖೆಯಲ್ಲಿ ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು.

ಬ್ಯಾಂಕ್ ಶಾಖೆಗಳ ನಿಯಮಿತ ಚಟುವಟಿಕೆಗಳಿಗೆ ಅಡ್ಡಿಯಾಗುವುದನ್ನು ತಪ್ಪಿಸಲು, ಮೇ 23, 2023 ರಿಂದ ಯಾವುದೇ ಬ್ಯಾಂಕ್‌ನಲ್ಲಿ ರೂ 2,000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು. ಕೇಂದ್ರ ಬ್ಯಾಂಕ್ ಗಮನಿಸಿದೆ.

2,000ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top