ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ ನೇರ ಸಂದರ್ಶನ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪೆಂಟಗಾನ್ ಸ್ಪೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಯ ಮಾನವ ಸಂಪನ್ಮೂಲ ವಿಭಾಗದ ವರಿಷ್ಠರಾದ ರಚನಾ ಜೆ ಶೆಟ್ಟಿ ಮತ್ತು ಕಾಜಲ್ ರವರು ನೇರ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಈ ಸಂದರ್ಶನದಲ್ಲಿ 206 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಯ್ಕೆ ಪ್ರಕ್ರಿಯೆಯ ವಿವಿಧ ಹಂತಗಳಾದ ನೇಮಕಾತಿ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದಲ್ಲಿ ಉತ್ತೀರ್ಣರಾದ 6 ವಿದ್ಯಾರ್ಥಿಗಳು ಪೆಂಟಗಾನ್ ಸ್ಪೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಮತ್ತು ಹರೀಶ ಶೆಟ್ಟಿ ಯವರ ತಂಡವು ಯಶಸ್ವಿಯಾಗಿ ನೇಮಕಾತಿ ಪ್ರಕ್ರಿಯೆಯನ್ನು ಸಂಘಟಿಸಿ ನಿರ್ವಹಣೆ ಮಾಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ