ಪಾಣಾಜೆ: 2022-2023 ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ 100 ಫಲಿತಾಂಶ ಬಂದಿರುತ್ತದೆ.
ಪರೀಕ್ಷೆಗೆ ಒಟ್ಟು 27 ವಿದ್ಯಾರ್ಥಿಗಳು ಹಾಜರಾಗಿದ್ದರು.. ನಾಲ್ಕು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿಯೂ, 18 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಹಾಗೂ ಐದು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾರೆ. ಅರ್ಪಿತಾ ಪಿ, ಪಡ್ಯoಬೆಟ್ಟು ರಾಮನಾಯ್ಕ ಹಾಗೂ ಪುಷ್ಪ ಅವರ ಪುತ್ರಿ 93.60% ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ತನುಶ್ರೀ, ಕಾಕೆಕೊಚ್ಚಿ ರಾಮಚಂದ್ರಹಾಗೂ ಸೀತಾ ಅವರ ಪುತ್ರಿ 93.28% ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ