ರಾಜ್ಯ ಪರಿಸರ ಪ್ರಶಸ್ತಿ: ಅರ್ಜಿ ಆಹ್ವಾನ

Upayuktha
0

 


ಮಂಗಳೂರು: 2022-23ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗೆ ಕರ್ನಾಟಕ ಸರ್ಕಾರದ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖಾ ವತಿಯಿಂದ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳನ್ನು ಗುರುತಿಸಲು  ಅರ್ಜಿ, ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

     

ಈ ಪ್ರಶಸ್ತಿಗಳನ್ನು  ಮಲೆನಾಡು ಮತ್ತು ಕರಾವಳಿ ವಲಯ, ದಕ್ಷಿಣ ವಲಯ ಮತ್ತು ಉತ್ತರ ವಲಯಗಳಲ್ಲಿ ತಲಾ ಒಬ್ಬರು ವ್ಯಕ್ತಿ ಮತ್ತು ಒಂದು ಸಂಸ್ಥೆಗೆ ನೀಡಲಾಗುವುದು.  ವ್ಯಕ್ತಿ/ಸಂಸ್ಥೆಯ ಹೆಸರು ವ್ಯವಹರಿಸಬೇಕಾದ ವಿಳಾಸ, ನಿರ್ವಹಿಸಲಾದ ಕಾರ್ಯ ಕುರಿತಾಗಿ ಪೂರಕ ದಾಖಲೆಗಳೊಂದಿಗೆ ವಿವರ, ಪರಿಸರ ಸಂರಕ್ಷಣೆಗಾಗಿ ನಿರ್ವಹಿಸಲಾಗಿರುವ ಕಾರ್ಯದ ಅವಧಿ ಮತ್ತು ಸಾಧನೆ, ಕಾರ್ಯಕ್ರಮಗಳ ನಿರ್ವಹಣೆಗಾಗಿ ವಿನಿಯೋಸಲಾಗಿರುವ ಹಣ ಮತ್ತು ಆರ್ಥಿಕ ಸಹಾಯದ ಮೂಲಗಳು, ಪಡೆದಿರುವ ಪ್ರಶಸ್ತಿಗಳ ವಿವರ ಮತ್ತು ಸಾಕ್ಷ್ಯಧಾರಗಳೊಂದಿಗೆ ಅರ್ಜಿಯನ್ನು ಪ್ರಾದೇಶಿಕ ನಿರ್ದೇಶಕರು(ಪರಿಸರ), 3ನೇ ಮಹಡಿ, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಟ್ಟಡ, ಮಂಗಳೂರು  ಈ ಕಚೇರಿಗೆ ಸಲ್ಲಿಸಬೇಕು.

      

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂ:0824-2450250 ಸಂಪರ್ಕಿಸುವಂತೆ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top