ಅಜ್ಜರಕಾಡು: ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 2022-23ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಉಡುಪಿಯ ಸಾಫಲ್ಯ ಟ್ರಸ್ಟ್‍ನ ಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ನಿರೂಪಮಾ ಪ್ರಸಾದ್ ಶೆಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಹಿರಿಯರ ರಕ್ಷಣೆ ಮತ್ತು ಕಿರಿಯರಿಗೆ ಕೊಡುವ ಪ್ರೋತ್ಸಾಹ ಭಗವಂತನ ಕೃಪೆಗೆ ಪಾತ್ರವಾಗುವಂತದ್ದು. ಯುವ ಜನತೆಗೆ ಕ್ರೀಡೆಯಲ್ಲಿ ಸರಿಯಾದ ಪ್ರೋತ್ಸಾಹ ದೊರೆತಲ್ಲಿ ನಾವೆಲ್ಲಾ ಹೆಮ್ಮೆಪಡುವಂತ ಸಾಧನೆ ಮಾಡಬಲ್ಲರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದಪ್ರೊ. ಸುರೇಶ್ ರೈ ಕೆ. ಯುವ ಜನತೆ ಕ್ರೀಡೆಯಲ್ಲಿ ಸಕ್ರೀಯರಾಗುವಂತೆ ಕರೆಯಿತ್ತರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಹರಿಯಪ್ಪ ಕೋಟ್ಯಾನ್, ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ಬೋಧಕ ಬೋದಕೇತರರು ಉಪಸ್ಥಿತರಿದ್ದರು.
ಕ್ರೀಡಾಕೂಟ ಆಯೋಜಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಉಡುಪಿ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರೆ, ವಿದ್ಯಾರ್ಥಿ ಕ್ರೀಡಾ ಪ್ರತಿನಿಧಿ ಆಶಯ್ ವಂನಾರ್ಪಣೆಗೈದರು. ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ನಿರೂಪಿಸಿದರು. ನಂತರದಲ್ಲಿ ವಿವಿಧ ಅಥ್ಲೆಟಿಕ್ ಸ್ಪರ್ಧೆಗಳ ಜೊತೆಗೆ ವಿದ್ಯಾರ್ಥಿಗಳ ಅಂತರ್ ತರಗತಿ ಪುರುಷರ ಮತ್ತು ಮಹಿಳಾ ಹಗ್ಗಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ