ಹಗ್ಗಜಗ್ಗಾಟ: ಆಳ್ವಾಸ್ ಮಹಿಳೆಯರು ಚಾಂಪಿಯನ್- ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟ ಪುರುಷರ ತಂಡ

Upayuktha
0

 

ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿದ್ದು, ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ. 


ಮಹಿಳೆಯರ ಫೈನಲ್‍ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‍ನಲ್ಲಿ ಉಜಿರೆ ಎಸ್‍ಡಿಎಂ ಕಾಲೇಜು ವಿರುದ್ಧ ಜಯ ಸಾಧಿಸಿತ್ತು. 


ಪುರುಷರ ಸೆಮಿಫೈನಲ್‍ನಲ್ಲಿ ಆಳ್ವಾಸ್ ತಂಡವು ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಮಣಿಸಿತ್ತು. ಆದರೆ, ಫೈನಲ್‍ನಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ವಿರುದ್ಧ ಸೋಲು ಕಂಡಿತು. 


ಎರಡೂ ತಂಡಗಳಿಗೆ ಆಳ್ವಾಸ್ ತಂಡದ ತರಬೇತುದಾರ ಪಾಶ್ರ್ವನಾಥ್ ಜೈನ್ ತರಬೇತಿ ನೀಡಿದ್ದರು. ವಿಜೇತರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top