ಉಡುಪಿ: ಉಚಿತ ಕಣ್ಣಿನ ತಪಾಸಣಾ ಶಿಬಿರ

Upayuktha
0


ಉಪ್ಪೂರು:
ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಉಪ್ಪೂರು ಅಬ್ಬನಕುದ್ರು ಉಪಕೇಂದ್ರದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.


ಸದರಿ ಶಿಬಿರದಲ್ಲಿ 45 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 6 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದ 7 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.


ಶಿಬಿರದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಮ್.ಜಿ ರಾಮ, ಕೊಳಲಗಿರಿ ಪ್ರಾ.ಆ.ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಬಿಂದು ಹಾಗೂ ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top