ರಾಷ್ಟಮಟ್ಟದ ಅಥ್ಲೀಟ್,ನೌಕರರ ಸಂಘದ ಕಾರ್ಯದರ್ಶಿ ಹೆಚ್. ಉದಯ ಕುಮಾರ್ ಶೆಟ್ಟಿ ವಯೋನಿವೃತ್ತಿ ಅಭಿನಂದನೆ

Upayuktha
0

 


ಉಡುಪಿ: ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾ ಕಚೇರಿಯ ಹಿರಿಯ ಪ್ರಯೋಗಶಾಲಾ ಅಧಿಕಾರಿ ಆದ ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಮೇ 31 ರಂದು ಸೇವಾ ನಿವೃತ್ತಿ ಹೊಂದಲಿದ್ದು,ಇದರ ಪ್ರಯುಕ್ತ ಉಡುಪಿಯ ಪುರಭವನದಲ್ಲಿ ಇಂದು ನಡೆದ ಅಭಿನಂದನಾ ಸಮಾರಂಭದಲ್ಲಿ,ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

  

ಹೆಚ್. ಉದಯ ಕುಮಾರ್ ಶೆಟ್ಟಿ ಅವರು ಆರೋಗ್ಯ ಇಲಾಖೆಯಲ್ಲಿ 34 ವರ್ಷಗಳ ಸೇವೆ ಸಲ್ಲಿಸಿದ್ದು, ಉಡುಪಿ ಜಿಲ್ಲಾ  ಸರಕಾರಿ ನೌಕರರ ಸಂಘದಲ್ಲಿ 12 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

  

ಅತ್ಯುತ್ತಮ ಕ್ರೀಡಾಪಟು ಆಗಿರುವ ಇವರು, ಅಖಿಲ ಭಾರತ ಮಟ್ಟದ ನಾಗರೀಕ ಸೇವಾ ಕ್ರೀಡಾಕೂಟದಲ್ಲಿ ಸತತ 7 ವರ್ಷಗಳ ಕಾಲ ರಾಜ್ಯವನ್ನು ಪ್ರತಿನಿಧಿಸಿದ್ದು, ಕಂಚಿನ ಪದಕವನ್ನೂ ಹಾಗೂ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಸಹ ಹಲವು ಪದಕಗಳನ್ನು ಪಡೆದಿದ್ದಾರೆ. ಮ್ಯಾರಾಥಾನ್ ಓಟಗಾರರಾಗಿರುವ ಇವರು ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ನಡೆದ ಮಾಸ್ಟರ್ ಅಥ್ಲೀಟ್ ಕ್ರೀಡಾಕೂಟಗಳಲ್ಲಿ ಸಹ ಭಾಗವಹಿಸಿ ಪದಕಗಳನ್ನು ಪಡೆದಿದ್ದು, ಅನೇಕ ಯುವ ಅಥ್ಲೀಟ್ ಗಳಿಗೆ ಮಾರ್ಗದರ್ಶಕರಾಗಿದ್ದಾರೆ.  

 

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ನೌಕರರ ಸಂಘ, ವಿವಿಧ ಕ್ರೀಡಾ ಸಂಸ್ಥೆಗಳ ವತಿಯಿಂದ ಕೂಡಾ ಉದಯ ಕುಮಾರ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. 

  

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರಕಾರಿ ನೌಕರರ ಸಂಘದ ಉಪಾಧ್ಯ್ಯಕ್ಷ ಪ್ರಶಾಂತ್ ಹಾವಂಜೆ, ಕೋಶಾಧಿಕಾರಿ ಷರೀಫ್ ಮ ರೋಣ, ನಿಕಟ ಪೂರ್ವ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಕಾರ್ಕಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ ಎನ್, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಅರೋಗ್ಯ ಇಲಾಖೆಯ ವೈದ್ಯರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಭಿನಂದನೆ ಸಲ್ಲಿಸಿದರು. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top