ಉಡುಪಿ: 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

Upayuktha
0

ಉಡುಪಿ: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ.


ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.


ಮೀನುಗಾರಿಕೆ ನಿಷೇಧದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟಕರ ರಹಿತ ಡೀಸಿಲ್ ಪಡೆಯಲು ಅನರ್ಹರಾಗುತ್ತಾರೆ.


ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top