ವಿಕಲಚೇತನರಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

Upayuktha
1 minute read
0

 

ಉಡುಪಿ: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳಾದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂಉದ್ಯೋಗಕ್ಕಾಗಿ ಶೇ. 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇ. 50 ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿ-ಚಕ್ರವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು ಎರಡನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆಯಂತ್ರ, ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್‍ಕಿಟ್ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. 


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top