ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವೇಕಾನಂದ ಇನ್‍ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸಸ್‍ನ ನೂತನ ಆಡಳಿತ ಕಚೇರಿಯನ್ನು ಸೋಮವಾರದಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಉದ್ಘಾಟಿಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು, ಕಾಲೇಜಿನ ಪ್ರಾಂಶುಪಾಲ ಡಾ.ಗುರುರಾಜ್ ಎಂ.ಪಿ ಹಾಗೂ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಸಕ್ತ ವರ್ಷದಲ್ಲಿ ಬಿ. ಫಾರ್ಮಾ ಹಾಗೂ ಡಿ. ಫಾರ್ಮಾ ಆರಂಭಗೊಳ್ಳಲಿದ್ದು, ದಾಖಲಾತಿ ಆರಂಭಗೊಂಡಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ