ವಿವೇಕಾನಂದ ಪಿಯು ಕಾಲೇಜು ವಿದ್ಯಾರ್ಥಿಗಳು ಎನ್ ಡಿಎ ಗೆ ಆಯ್ಕೆ

Upayuktha
0

ಪುತ್ತೂರು:  ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಏಪ್ರಿಲ್ ನಲ್ಲಿ ನಡೆಸಿದ ರಾಷ್ಟ್ರ ಮಟ್ಟದ ಎನ್ ಡಿಎ ಅರ್ಹತಾ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 


ವಿದ್ಯಾರ್ಥಿಗಳಾದ ವಿಪುಲ್. ಎಸ್ ಮತ್ತು ತಿಯಾನಂದ್. ಎಮ್ ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆ ಪಡೆದಿದ್ದಾರೆ. ಪ್ರತಿ ವರ್ಷ ಸುಮಾರು  2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುತ್ತಾರೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಭಾಗವಹಿಸುವ ಅರ್ಹತೆ ಪಡೆಯುತ್ತಾರೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು‌ ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top