ಉಡುಪಿ: ವಿಶ್ವ ರೆಡ್ ಕ್ರಾಸ್ ದಿನಾಚರಣೆ

Upayuktha
0


ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಇವರ ಸಹಭಾಗಿತ್ವದಲ್ಲಿ ವಿಶ್ವ ರೆಡ್‍ಕ್ರಾಸ್ ದಿನಾಚರಣೆ ಕಾರ್ಯಕ್ರಮವು ಮೇ 8 ರಂದು ಬೆಳಗ್ಗೆ 10 ಘಂಟೆಗೆ ನಗರದ ಅಜ್ಜರಕಾಡು ರೆಡ್‍ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‍ನಲ್ಲಿ ನಡೆಯಲಿದೆ.

 

ಕಾರ್ಯಕ್ರಮವನ್ನು ಮಣಿಪಾಲ ಮಾಹೆಯ ಪ್ರೊ. ಚಾನ್ಸಲರ್ ಡಾ. ಹೆಚ್.ಎಸ್. ಬಲ್ಲಾಳ್ ಉದ್ಘಾಟಿಸಲಿದ್ದು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

 

ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್, ರೆಡ್‍ಕ್ರಾಸ್ ಗೌರವ ಕಾರ್ಯದಶಿ ಬಿ. ರತ್ನಾಕರ ಶೆಟ್ಟಿ, ಗೌರವ ಖಚಾಂಚಿ ರಮಾದೇವಿ, ಕಾಲೇಜಿನ ಯುವ ರೆಡ್‍ಕ್ರಾಸ್ ಪ್ರೋಗ್ರಾಮ್ ಆಫೀಸರ್ ಫ್ರೊ. ಶೋಭಾ ಆರ್, ಆಡಳಿತ ಮಂಡಳಿ ಸದಸ್ಯರು ಹಾಗೂ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಲಿರುವರು.

 

ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top