ವಳಚ್ಚಿಲ್ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ
ಮಂಗಳೂರಿನ ವಳಚ್ಚಿಲ್ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ ನಡೆಯಿತು.
ಮಂಗಳೂರು: ವಿದ್ಯಾರ್ಥಿ ಜೀವನದಲ್ಲಿ ದೂರದೃಷ್ಟಿ ಮತ್ತು ಗುರಿ ಸ್ಪಷ್ಟವಾಗಿದ್ದರೆ ಕಲಿಕೆ ಮತ್ತು ಸಾಧನೆ ಅರ್ಥಪೂರ್ಣವಾಗುತ್ತದೆ ಎಂದು ಎಕ್ಸ್‍ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಅವರು ಅಭಿಪ್ರಾಯಪಟ್ಟರು.
ವಳಚ್ಚಿಲ್ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪದವಿಪೂರ್ವ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ಆಯೋಜಿಸಿದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತ್ಯುತ್ತಮ ಸಂವಹನ ಕೌಶಲ್ಯದಿಂದ ವಿದ್ಯಾರ್ಥಿಗಳ ಸಾಧನಾ ಪಥ ಉತ್ತುಂಗಕ್ಕೇರುತ್ತದೆ ಎಂದವರು ವಿವರಿಸಿದರು.
ಪ್ರಧಾನ ಭಾಷಣ ಮಾಡಿದ ಎಕ್ಸ್‍ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಅವರು, ವಿದ್ಯಾರ್ಥಿಗಳು ಎರಡು ವರ್ಷಗಳ ಪದವಿಪೂರ್ವ ಶಿಕ್ಷಣ ಮುಗಿಸಿ ಮನೆಗೆ ತೆರಳುವಾಗ ಪೋಷಕರು ಹೆಮ್ಮೆಪಡುವಂಥ ಸಾಧನೆ ಮಾಡಿರಬೇಕು. ಹಾಗೆಯೇ ಹೊಂದಾಣಿಕೆಯಿಂದ ಬಾಳುವಷ್ಟು ಪ್ರಬುದ್ಧರಾಗಬೇಕು ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಎಕ್ಸ್‍ಪರ್ಟ್ ಪ್ರತಿಜ್ಞೆ ಮತ್ತು ಸಾಧನೆಯ ಮೂಲಮಂತ್ರವನ್ನು ಬೋಧಿಸಿದರು. ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್.ನಾಯಕ್ ಅವರು ಮಾತನಾಡಿ, ಮಾತೃಭಾಷೆಯಂತೆ ಇಂದು ತಂತ್ರಜ್ಞಾನದ ಬಳಕೆಯಾಗುತ್ತಿದೆ. ತಂತ್ರಜ್ಞಾನದ ಮಾಹಿತಿ ಕೇವಲ ತೋರಿಕೆಗೆ ಇರಬಾರದು. ಕಾಲೇಜಿನಲ್ಲಿ ತಂತ್ರಜ್ಞಾನವನ್ನು ವಿವಿಧ ಆಯಾಮಗಳಲ್ಲಿ ಅಳವಡಿಸಿದ ಬಗೆಯನ್ನು ಸವಿವರವಾಗಿ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಕೆ.ವಿಜಯನ್ ಕರಿಪ್ಪಾಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ ವಾರ್ಷಿಕ ಶೈಕ್ಷಣಿಕ ಮಾಹಿತಿ ಮತ್ತು ಎಐಸಿಇ ಸಂಯೋಜಕ ಶ್ಯಾಮ್‍ಪ್ರಸಾದ್ ಎಸ್ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿವರಣೆ ನೀಡಿದರು.
ಉಪಪ್ರಾಂಶುಪಾಲ ರಾಘವೇಂದ್ರ ಶೆಣೈ (ಆಡಳಿತ) ಮತ್ತು ಕಾರ್ಯಕ್ರಮ ನಿರ್ದೇಶಕ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗ ಉಪನ್ಯಾಸಕಿ ಧೃತಿ ವಿ.ಹೆಗ್ಡೆ ಮತ್ತು ಇಂಗ್ಲಿಷ್ ವಿಭಾಗದ ಅನಿತಾ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಭವ್ಯ ವಿ ಮತ್ತು ಡಾ. ಮನೋಹರ ಬಿ. ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ