ಕಾರ್ಕಳ: ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಜನರಿಗೆ ಗ್ಯಾರಂಟಿ ಕಾರ್ಡನ್ನು ನೀಡಿದ್ದು ಅದರಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿಯನ್ನು ನೀಡಿತ್ತು.
ಈ ಬಗ್ಗೆ ಸಭೆ ನಡೆಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಯೋಜನೆ ಜಾರಿಗೆ ತರುವುದರಲ್ಲಿ ಯಾವುದೇ ಸಂಶಯ ಇಲ್ಲ. ಯಾವ ಷರತ್ತುಗಳನ್ನು ಕೂಡ ವಿಧಿಸುವುದಿಲ್ಲ. ಸಿಎಂ ಜೊತೆ ಚರ್ಚಿಸಿ ಈ ಬಗ್ಗೆ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆದರೆ ಈ ಅವಕಾಶ ಸರಕಾರಿ ಬಸ್ಸುಗಳಲ್ಲಿ ಮಾತ್ರ ಲಭ್ಯವಿದ್ದು, ಇದರಿಂದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗದ ಜನರಿಗೆ ಅನ್ಯಾಯವಾಗಲಿದೆ. ಈ ಜಿಲ್ಲೆಯ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ಸುಗಳ ಮೂಲಕ. ಸರಕಾರಿ ಬಸ್ ಸೌಲಭ್ಯ ಈ ಭಾಗಗಳಲ್ಲಿ ಲಭ್ಯವಿಲ್ಲ. ಆದ್ದರಿಂದ ಸರಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರಕಾರಿ ಸೇವೆಗೆ ಮಾತ್ರ ಸೀಮಿತಗೊಳಿಸದೆ, ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಶಾಸಕ ವಿ.ಸುನಿಲ್ ಕುಮಾರ್ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ