ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Upayuktha
0


ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯ ಕ್ರೀಡಾ ಸಂಘದ ವತಿಯಿಂದ ಜೂನ್ 21ರಂದು ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ’ ಜರುಗಿತು.

ಪ್ರಭಾರ ಮುಖ್ಯೋಪಾಧ್ಯಾಯ ಎಸ್. ರಾಜಗೋಪಾಲ ಜೋಶಿ ಅವರು ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ಮತ್ತು ಯೋಗ ತರಬೇತುದಾರರಾದ ಪಿ. ಉದಯಕೃಷ್ಣ ಭಟ್ ಮಾರ್ಗದರ್ಶನದಲ್ಲಿ ಪ್ರಾಯೋಗಿಕ ಯೋಗ ಅಭ್ಯಾಸ ಏರ್ಪಡಿಸಲಾಗಿತ್ತು. ಎಲ್ಲಾ ಶಿಕ್ಷಕ ಶಿಕ್ಷಕಿಯರು ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಅವರು ವಿಶ್ವ ಯೋಗ ದಿನದ ಪ್ರತಿಜ್ಞಾವಿಧಿ ಬೋಧಿಸಿದರು. ಗಣಿತ ಸಹಶಿಕ್ಷಕಿ ಶ್ರೀಮತಿ ಗೀತಾ ಎಚ್. ಶೆಟ್ಟಿ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top