ಆಳ್ವಾಸ್ ಕೇಂದ್ರೀಯ ಶಾಲೆಯ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭ
ವಿದ್ಯಾಗಿರಿ(ಮೂಡುಬಿದಿರೆ): ‘ನಾಯಕತ್ವ ಗುಣ ಇದ್ದವರಲ್ಲಿ ಗುರಿ ಸ್ಪಷ್ಟವಾಗಿರುತ್ತದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.
ಆಳ್ವಾಸ್ ಕೇಂದ್ರೀಯ ಶಾಲೆಯ 2023-24ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು.
ನಾಯಕತ್ವ ಗುಣವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ಪ್ರಜೆ ಆಗಬಹುದು. ಶಾಲಾ ಹಂತದಲ್ಲೇ ನಾಯಕತ್ವ ವಹಿಸಿ ಜವಾಬ್ದಾರಿಯನ್ನು ನಿಭಾಯಿಸಿ ಎಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ನಾಯಕತ್ವ ಗುಣವನ್ನು ಬೆಳೆಸುವಲ್ಲಿ ಶಾಲಾ ಸಂಘದ ಚುನಾವಣೆಯು ಮುಖ್ಯ ಪಾತ್ರ ವಹಿಸುತ್ತದೆ. ಶಾಲಾ ದಿನಗಳೇ ಜೀವನದ ಸುವರ್ಣ ಕಾಲ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇದುವೇ ನಮ್ಮ ಜೀವನಕ್ಕೆ ಅಡಿಪಾಯ ಎಂದರು
ಆಳ್ವಾಸ್ ಕೇಂದ್ರೀಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆನೆಟ್ ಪಾಯಸ್ ಪ್ರಮಾಣವಚನ ಬೋಧಿಸಿದರು. ಆಳ್ವಾಸ್ ಶಾಲೆಯ ಆಡಳಿತಾಧಿಕಾರಿ ಪ್ರೀತಮ್ ಕುಂದರ್, ವಸತಿ ನಿಲಯಗಳ ಆಡಳಿತಾಧಿಕಾರಿ ಜಗನ್ನಾಥ್, ಆಳ್ವಾಸ್ ಕೇಂದ್ರೀಯ ಶಾಲೆಯ ಪ್ರಾಂಶುಪಾಲ ಮೊಹಮ್ಮದ್ ಶಫಿ ಶೇಖ್, ಆಳ್ವಾಸ್ ಕೇಂದ್ರೀಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸರ್ವಾಣಿ ಡಿ. ಹೆಗ್ಡೆ ಇದ್ದರು
ವಿದ್ಯಾರ್ಥಿ ಅದಿತಿ ಭಟ್ ನಿರೂಪಿಸಿ, ಶಿಕ್ಷಕಿ ಸಿಂಥಿಯಾ ಸ್ವಾಗತಿಸಿದರು. ವಿದ್ಯಾರ್ಥಿ ಇಶಾನ್ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ