ಸ್ವಯಂ ಅರಿವು ಅಗತ್ಯ: ಗೋಪಾಲಕೃಷ್ಣ ಎನ್. ಭಟ್

Upayuktha
0

         ಆಳ್ವಾಸ್ ಕಾಲೇಜು, ಎಐಇಟಿ: ‘ಸಂಸ್ಕೃತ ಚಿಂತನಂ' ಕಾರ್ಯಕ್ರಮ

ಮಿಜಾರು: ನಮನ್ನು ನಾವು ಮೊದಲು ಅರಿತುಕೊಳ್ಳಬೇಕು ಎಂದು ಸಾಹಿತಿ ಪ್ರೊ. ಗೋಪಾಲಕೃಷ್ಣ ಎನ್. ಭಟ್ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು(ಎಐಇಟಿ) ಹಾಗೂ ಆಳ್ವಾಸ್ ಕಾಲೇಜು ಸಂಸ್ಕೃತ ವಿಭಾಗ, ಸಂಸ್ಕೃತ ಸಂಘ ಹಾಗೂ ಪ್ರಜ್ಞಾ ಜಿಜ್ಞಾಸಾವೇದಿಃ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಸಂಸ್ಕೃತ ಚಿಂತನಂ' ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು. 


ಜ್ಞಾನ ವೃದ್ಧಿಗೆ ಸ್ವಯಂ ಅನಾವರಣ ಮಾಡಬೇಕು. ದೇಹ, ಇಂದ್ರೀಯ, ಮನಸ್ಸು ಸೇರಿ ವ್ಯಕ್ತಿ ಸಂಪೂರ್ಣವಾಗುತ್ತಾನೆ. ಬಾಹ್ಯ ಪ್ರಪಂಚದ ಕಡೆಗ ಗಮನ ಹರಿಸುವ ಬದಲು, ನಮ್ಮ ಆತ್ಮದ ಬಗ್ಗೆ ತಿಳಿದುಕೊಳ್ಳಬೇಕು. ನಮ್ಮನ್ನು ನಾವು ಅರಿತಾಗ ಮಾತ್ರ ಹೊರ ಜಗತ್ತಿನಲ್ಲಿ ಬದಲಾವಣೆ ತರಲು ಸಾಧ್ಯ ಎಂದರು. 


ಓಂ ಉಚ್ಚಾರ, ಧ್ಯಾನ ಹಾಗೂ ಯೋಗದಿಂದ ಹಲವು ರೋಗ ಮುಕ್ತಿ ಸಾಧ್ಯ. ಪುರಾತನ ಸಂಸ್ಕೃತಿ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕು ಎಂದರು.


ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಬೇಲೂರು ರಾಮಕೃಷ್ಣ ಮಿಷನ್ ವಿವೇಕಾನಂದ ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆ ಮುಖ್ಯಸ್ಥ ಜಪಸಿದ್ಧಾನಂದ ಸ್ವಾಮೀಜಿ ಶಿಖರೋಪನ್ಯಾಸ ನೀಡಿದರು. 


ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಭಟ್ ಗಾಳಿಮನೆ   ಸ್ವಾಗತಿಸಿ, ಅನಘಾ, ಚೈತ್ರಾ, ಸುನ್ನಿಧಿ ಪ್ರಾರ್ಥನೆ ಹಾಡಿದರು. ವಿದ್ಯಾರ್ಥಿನಿ ಪ್ರತೀಕ್ಷಾ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಸಿಂಧು ಭಟ್ ನಿರೂಪಿಸಿ, ಸಿವಿಲ್ ವಿಭಾಗದ ಉಪನ್ಯಾಸಕ ಡಾ ರಮೇಶ್ ರಾವ್ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top