ಬಿಎಎಸ್‌ಎಫ್‌ ನಿಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Upayuktha
0

ಮಂಗಳೂರು: ಬಿಎಎಸ್‌ಎಫ್‌ ಇಂಡಿಯಾ ಲಿಮಿಟೆಡ್‌, ಮಂಗಳೂರು ಇದರ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಉಪಕ್ರಮದ ಅಂಗವಾಗಿ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಚಿತ್ರಾಪುರ, ಕುಳಾಯಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು.  ಶಾಲೆಯ 85 ವಿದ್ಯಾರ್ಥಿಗಳ  ಈ ವರ್ಷದ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸಲು ಇದರಿಂದ ಸಹಾಯವಾಗುತ್ತದೆ.


ಈ ಸಂದರ್ಭದಲ್ಲಿ ಮಾತನಾಡಿದ ಮಾನವ ಸಂಪನ್ಮೂಲ ಮುಖ್ಯಸ್ಥ ಸಂತೋಷ್ ಪೈ, ಬಿಎಎಸ್‌ಎಫ್ ತನ್ನ ಸಿಎಸ್‌ಆರ್ ಚಟುವಟಿಕೆಗಳ ಅಡಿಯಲ್ಲಿ ಬಡ ಆರ್ಥಿಕ ಹಿನ್ನೆಲೆಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ದಿನಗೂಲಿ ಕಾರ್ಮಿಕರ ಮಕ್ಕಳಾಗಿದ್ದು, ತಮ್ಮ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಖರೀದಿಸಲು ಕಷ್ಟಪಡುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ, ಈ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಬಿಎಎಸ್‌ಎಫ್‌ ಈ ಬಡ ಕುಟುಂಬಗಳಿಗೆ ಬೆಂಬಲ ನೀಡುತ್ತದೆ ಎಂದು ಹೇಳಿದರು.


ಬಿಎಎಸ್‌ಎಫ್‌ ಇಂಡಿಯಾ ಲಿಮಿಟೆಡ್ ತನ್ನ ಅನೇಕ ಸಿಎಸ್‌ಆರ್ ಚಟುವಟಿಕೆಗಳನ್ನು ಸುರತ್ಕಲ್ ಮತ್ತು ಸುತ್ತಮುತ್ತಲಿನ 35 ಸರ್ಕಾರಿ ಶಾಲೆಗಳಲ್ಲಿ ನಡೆಸುತ್ತಿದೆ. ಸ್ಕಾಲರ್‌ಶಿಪ್‌ಗಳ ವಿತರಣೆ, ನೈರ್ಮಲ್ಯ ಸೌಲಭ್ಯದ ನಿರ್ಮಾಣ, ನೀರು ಶುದ್ಧೀಕರಣ ಸಾಧನಗಳ ಕೊಡುಗೆ, ನೈರ್ಮಲ್ಯ ಶಿಕ್ಷಣ ಕಾರ್ಯಕ್ರಮಗಳು, ಮೂಲಸೌಕರ್ಯ ಅಭಿವೃದ್ಧಿ ಇತ್ಯಾದಿಗಳು ಈ ಚಟುವಟಿಕೆಗಳಲ್ಲಿ ಸೇರಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top