ಬಿಜೆಪಿ ಮಂಗಳೂರು ಉತ್ತರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ, ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಸನ್ಮಾನ

Upayuktha
0

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಪ್ರಥಮ ವಿಶೇಷ ಕಾರ್ಯಕಾರಿಣಿ ಸಭೆ ಮತ್ತು ಅವಲೋಕನಾ ಸಭೆಯು ಕಾವೂರು ವ್ಯವಸಾಯ ಸಹಕಾರಿ ಸಭಾಭವನದಲ್ಲಿ ನಡೆಯಿತು. ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಡಾ. ಭರತ್ ಶೆಟ್ಟಿಯವರನ್ನು ಮಂಡಲದ ವತಿಯಿಂದ ಸನ್ಮಾನಿಸಲಾಯಿತು.

ಮತದಾರರಿಗೂ ಮತ್ತು ಚುನಾವಣೆಯಲ್ಲಿ ರಾತ್ರಿ ಹಗಲು ಅನ್ನದೇ‌ ಕೆಲಸ ಮಾಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಶಾಸಕರಾದ ಡಾ. ಭರತ್ ಶೆಟ್ಟಿಯವರು ಧನ್ಯವಾದ ಅರ್ಪಿಸಿದರು

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್, ಮಂಡಲ ಪ್ರದಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಜಿಲ್ಲಾ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top