ಆಧುನಿಕ ದಿನಗಳಲ್ಲಿ ದೇಹಕ್ಕೆ ವ್ಯಾಯಾಮ ಕಡಿಮೆಯಾಗಿದೆ: ರಾಜಶ್ರೀ ನಟ್ಟೋಜ

Upayuktha
0

   ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ವಿಶ್ವಯೋಗ ದಿನ ಆಚರಣೆ


ಪುತ್ತೂರು:
ಹಿಂದಿನ ಕಾಲದಲ್ಲಿ ದೈನಂದಿನ ಚಟುವಟಿಕೆಗಳಿಂದಲೇ ದೇಹಕ್ಕೆ ನಿರಂತರ ವ್ಯಾಯಾಮ ದೊರಕುತಿತ್ತು. ಆದರೆ ಈಗ ಬದಲಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಇಂದಿನ ಬದುಕಿನಲ್ಲಿ ದೈಹಿಕ ವ್ಯಾಯಾಮಕ್ಕೆ ಆದ್ಯತೆ ದೊರಕುತ್ತಿಲ್ಲ. ದೇಹಶ್ರಮ ವಹಿಸುವಂತಹ ಕೆಲಸಗಳಿಗೆ ಆದ್ಯತೆ ಕಡಿಮೆಯಾಗುತ್ತಿದೆ. ಆದ್ದರಿಂದ ಯೋಗಾಭ್ಯಾಸವನ್ನು ಮಾಡುವುದು ಅನಿವಾರ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ವಿಶ್ವಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯೋಗ ವ್ಯಕ್ತಿಯ ಆರೋಗ್ಯವನ್ನು ಸದೃಢವಾಗಿ ಇರಿಸಿಕೊಳ್ಳುವಲ್ಲಿ ಸಹಾಯ ಮಾಡಿದರೆ ಧ್ಯಾನ ಮಾನಸಿಕ ಆರೋಗ್ಯವನ್ನು ಚೆನ್ನಾಗಿರಿಸುವಲ್ಲಿ ಸಹಕರಿಸುತ್ತದೆ. ಎಳವೆಯಿಂದಲೇ ಯೋಗ, ಧ್ಯಾನಗಳ ಮಹತ್ವವನ್ನು ಅರಿತು ಆಚರಿಸಿಕೊಂಡು ಬಂದಲ್ಲಿ ಉತ್ತಮ ಬದುಕು ನಮ್ಮದಾಗುವುದಕ್ಕೆ ಸಾಧ್ಯ. ಈ ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಹೆತ್ತವರು ಕಾರ್ಯತತ್ಪರರಾಗಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ, ಉಪಪ್ರಾಚಾರ್ಯೆ ಸುಜನಿ ಬೋರ್ಕರ್, ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top