ಶಕ್ತಿ ಯೋಜನೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರು

Chandrashekhara Kulamarva
0

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆ ಉದ್ಘಾಟನೆ



ಮಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆ ಶಕ್ತಿಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜು.11ರ ಭಾನುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗದ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top