ದ.ಕ ಜಿಲ್ಲಾ ಕಸಾಪ ಮತ್ತು ಶಾರದಾ ವಿದ್ಯಾಲಯ ಆಶ್ರಯದಲ್ಲಿ ಆಯೋಜನೆ
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ಶಾರದಾ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ಜೂನ್ 16ರಂದು ಶುಕ್ರವಾರ ಸಂಜೆ 4 ಗಂಟೆಗೆ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಲಿದೆ.
ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ, ಶ್ರೀನಾಥ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ದ.ಕ ಜಿಲ್ಲಾ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯಕ್, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜ, ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ ಅವರು ಪಾಲ್ಗೊಳ್ಳಲಿದ್ದಾರೆ.
ಉಡುಪಿ ಕಲ್ಸಂಕದ ಬಿ.ಆರ್. ನರಸಿಂಹ ರಾವ್ ಪುಸ್ತಕ ದಾನಿಗಳಾಗಿದ್ದಾರೆ. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮಂಜುನಾಥ್ ಎಸ್. ರೇವಣಕರ್ ಅವರ ಗೌರವ ಉಪಸ್ಥಿತಿ ಇರಲಿದೆ.
ದ.ಕ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ರಾಜೇಶ್ವರಿ ಎಂ., ವಿನಯ ಅಚಾರ್ಯ ಎಚ್, ಕೋಶಾಧ್ಯಕ್ಷ ಬಿ. ಐತಪ್ಪ ನಾಯ್ಕ್, ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಹಾಸ ಶೆಟ್ಟಿಮತ್ತು ಜಗದೀಶ ಎಡಪಡಿತ್ತಾಯ, ಸಂಘಟನಾ ಸಹ ಕಾರ್ಯದರ್ಶಿಗಳಾದ ಯು.ಎಚ್. ಖಾಲಿದ್ ಉಜಿರೆ ಮತ್ತು ಕಿರಣ್ ಪ್ರಸಾದ ರೈ ಕಾರ್ಯಕ್ರಮದ ಸಂಘಟಕರಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


