ನಿವೃತ್ತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಂ. ಪೂವಪ್ಪ ಅವರಿಗೆ ಬೀಳ್ಕೊಡುಗೆ

Upayuktha
0

ಮರವೂರು ಗ್ರಾೃಂಡ್ ಬೇ ಸಭಾಂಗಣದಲ್ಲಿ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಮತ್ತು ಅವರ ಪತ್ನಿ ಶಕುಂತಳಾ ಅವರನ್ನು ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಗೌರವಿಸಿದರು. ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಉಪಸ್ಥಿತರಿದ್ದರು.

ಮಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಬಜಪೆ ಪೊಲೀಸ್ ಠಾಣೆಯಲ್ಲಿ ನಿವೃತ್ತರಾದ ಎಚ್.ಎಂ.ಪೂವಪ್ಪ ಅವರಿಗೆ ಬೀಳ್ಕೊಡುಗೆ ನಡೆಯಿತು.

ಎಚ್.ಎಂ.ಪೂವಪ್ಪ ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಗೌರವಿಸಿದ ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಅವರು ಮಾತನಾಡಿ,  ಉತ್ತಮ ಸೇವಾ ಹಿನ್ನೆಲೆಯೊಂದಿಗೆ ಎಚ್.ಎಂ. ಪೂವಪ್ಪ ಅವರು ಸೇವೆಯಿಂದ ನಿವೃತ್ತರಾಗುತ್ತಿರುವುದು ಸಂತೋಷದ ವಿಷಯ. ನಿವೃತ್ತ ಜೀವನದಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇವಾ ಅವಧಿಯ ಒಳ್ಳೆಯ ಅನುಭವಗಳನ್ನು ಮೆಲುಕು ಹಾಕುತ್ತಾ ಸಂತೃಪ್ತ ಜೀವನ ನಡೆಸುವಂತೆ ಶುಭ ಹಾರೈಸಿದರು.

ಪೂವಪ್ಪ ಅವರು ನಡೆಸಿರುವ 38 ವರ್ಷ ಎರಡು ತಿಂಗಳ ಸೇವಾಅವಧಿ ಸುದೀರ್ಘವಾಗಿದೆ. ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸೇವಾಅವಧಿಯ ಸುಮಾರು ಶೇ.70 ಬಾಗವನ್ನು ಇಲಾಖೆ ಸಿಬ್ಬಂದಿ ಜೊತೆಯಲ್ಲೇ ಸಮವಸ್ತ್ರದೊಂದಿಗೆ ಕಳೆದಿರುತ್ತಾರೆ. ಕುಟುಂಬದ ಜೊತೆಗೆ ಕಳೆದಿರುವುದು ಕಡಿಮೆ. ಈ ವೃತ್ತಿಯಲ್ಲಿ ಇಲಾಕೆ ಸಿಬ್ಬಂದಿ ಮತ್ತು ಕುಟುಂಬದ ಸದಸ್ಯರ ತ್ಯಾಗ ಅನನ್ಯವಗಿದೆ ಎಂದು ಅವರು ಹೇಳಿದರು.

ಇಲಾಖೆಯ ಗೌರವ ಸ್ವೀಕರಿಸಿ ಮಾತನಾಡಿದ ಎಚ್.ಎಂ.ಪೂವಪ್ಪ ಅವರು, ಬಜಪೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ 38 ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ ತಾನು ಅದೇ ಬಜಪೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿಯಾಗುತ್ತಿದ್ದೇನೆ. ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಸಂತೃಪ್ತಿಯಿದೆ. ಇಲಾಖೆ ಹಿರಿಯ ಅಧಿಕಾರಿಗಳು, ಸಹದ್ಯೋಗಿ ಮಿತ್ರರು ತೋರಿದ ಪ್ರೀತಿ, ವಿಶ್ವಾಸ, ಸಹಕಾರಕ್ಕೆ ಅಭಾರಿಯಾಗಿದ್ದೇನೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರ ಜೊತೆಗಿನ ಅನುಭವ ಹಂಚಿಕೊಂಡರು. 

ಬಜಪೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಆರ್.ನಾಯಕ್ ಕೆ.ಆರ್.ನಾಯಕ್ ಮುಖ್ಯ ಅತಿಥಿಗಳಾಗಿದ್ದರು. ನಿವೃತ್ತ ಎಚ್.ಎಂ.ಪೂವಪ್ಪ ಅವರ ಪತ್ನಿ ಶಕುಂತಳಾ ಪೂವಪ್ಪ ಅವರು ಉಪಸ್ಥಿತರಿದ್ದರು.

ನಿವೃತ್ತ ಸಬ್ ಇನ್ಸ್‌ಪೆಕ್ಟರ್ ರಾಜಾರಾಂ ಕಾರ್ಯಕ್ರಮ ನಿರ್ವಹಿಸಿದರು. ಕೆಂಚಪ್ಪ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top