ಪುಂಜಾಲಕಟ್ಟೆ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ವಿಶೇಷ ಉಪನ್ಯಾಸ

Upayuktha
0

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1&2ರ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ದಿನಾಂಕ ಇಂದು (ಜೂ.21) "ಯುವಜನತೆಗಾಗಿ ಯೋಗ ಮತ್ತು ಆರೋಗ್ಯ"ದ ಬಗ್ಗೆ ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.


ಈ ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಕೆ ಶರತ್ ಕುಮಾರ್ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ವೀಣಾ ಭಟ್ ಇವರು ತಮ್ಮ ನುಡಿಗಳಿಂದ ಯುವಜನರಿಗೆ ಯೋಗದಿಂದ ಆಗುವ ಲಾಭಗಳ ಕುರಿತು ಅರಿವು ಮೂಡಿಸಿದರು.


ಯೋಗದ ವಿವಿಧ ಆಯಾಮಗಳ ಪರಿಚಯ ನೀಡಿದ ಬಳಿಕ, ವಿದ್ಯಾರ್ಥಿಗಳಿಗೆ ಸರಳ ಯೋಗಕ್ರಿಯೆ ಮಾಡಿಸಿ, ಯೋಗದಿಂದ ಮನಸ್ಸು ಹಾಗೂ ದೇಹದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ವಿವಿಧ ಯೋಗ ಪ್ರಕ್ರಿಯೆಗಳ ಅನುಭೂತಿಯನ್ನು ಆಸ್ವಾದಿಸಿದ ವಿದ್ಯಾರ್ಥಿಗಳು ಮುಂದೆಯೂ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಆಸಕ್ತಿ ತೋರಿದರು. ಈ ಕಾರ್ಯಕ್ರಮವನ್ನು ಕು. ಗಿರಿಜಾ ಅವರು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top