ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಯೋಗದಿನಾಚರಣೆ

Upayuktha
0


 ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಯೋಗದಿನಾಚರಣೆ ನಡೆಯಿತು. ಸಾಹಿತಿ, ಹವ್ಯಾಸಿ ಪತ್ರಕರ್ತ ಚಂದ್ರಶೇಖರ ಏತಡ್ಕ ಉದ್ಘಾಟಿಸಿ ಮಾತನಾಡುತ್ತಾ ಮನುಷ್ಯರಾದ ನಮ್ಮ ಜೀವನ ಸರಿಯಾಗಿರಬೇಕಿದ್ದರೆ ಯೋಗ ನಮ್ಮೊಂದಿಗಿರಬೇಕು. ಧ್ಯಾನದ ಮೂಲಕ ದೇವರನ್ನು ಮೆಚ್ಚಿಸಿದರೆ ಯೋಗದ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದರು. ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಕೃತ ಅಧ್ಯಾಪಕ ಬಾಲಕೃಷ್ಣ ಶರ್ಮ ಅನಂತಪುರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮಭಟ್ ದರ್ಭೆ ಮಾರ್ಗ ಸ್ವಾಗತಿಸಿ, ಅಧ್ಯಾಪಕ ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top