ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ ಹಾಗೂ ಜಿಲ್ಲೆಯ ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿತ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಾಗಾರ ಜೂ.12ರ ಸೋಮವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಊರ್ವಾ ಸ್ಟೋರ್ ವೃತದಿಂದ ಜಿಲ್ಲಾ ಪಂಚಾಯತ್ ವರೆಗೆ ಜಾಥಾ ನಡೆಯಲಿದೆ. ಜಾಥಾವನ್ನು ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಉದ್ಘಾಟಿಸುವರು.
ಕಾನೂನು ಅರಿವು ನೆರವು ಕಾರ್ಯಾಗಾರವನ್ನು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ.ಜೋಶಿ ಉದ್ಘಾಟಿಸುವರು.
ಜಿಲ್ಲಾ ಬಾಲಕಾರ್ಮಿಕಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ನಗರದ ಪೊಲೀಸ್‍ಆಯುಕ್ತ ಕುಲದೀಪ್‍ಕುಮಾರ್‍ಆರ್ ಜೈನ್, ಜಿಲ್ಲಾ ಪಂಚಾಯತ್ ನ ಮುಖ್ಯಕಾರ್ಯನಿರ್ವಣಾಧಿಕಾರಿ ಡಾ.ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ, ಮಹಾನಗರ ಪಾಲಿಕೆಯ ಆಯುಕ್ತ ಚೆನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ, ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್ ಬಿ.ಈ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಪೃಥ್ವಿರಾಜ್ ರೈ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೆನ್ನಿ ಡಿಸೋಜಾ, ಸಾರ್ವಜನಿಕ ಶಿಕ್ಷಣ ಇಲಾಖೆಯಉಪನಿರ್ದೇಶಕಡಿ.ಆರ್. ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಭೋವಿ, ಪ್ರಜ್ಞಾಕೌನ್ಸಿಲಿಂಗ್ ಸೆಂಟರ್‍ನ ನಿರ್ದೇಶಕ ಹಿಲ್ಡ್‍ರಾಯಪ್ಪನ್, ಉಪ ವಿಭಾಗ -1ರ ಕಾರ್ಮಿಕಅಧಿಕಾರಿ ಕುಮಾರಿಕಾವೇರಿ ಟಿ, ಉಪವಿಭಾಗ- 2ರ ಕಾರ್ಮಿಕಅಧಿಕಾರಿ ವಿಲ್ಮಾಎಲಿಜಬೆತ್‍ತೌವ್ರೋ ಹಾಗೂ ಜಿಲ್ಲಾ ಬಾಲಕಾರ್ಮಿಕರಯೋಜನಾ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ್ ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ