ಮಂಜೇಶ್ವರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ (NSCDF) ಆಶ್ರಯದಲ್ಲಿ ಒಂದು ದಿನದ ವಿಚಾರಗೋಷ್ಠಿ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಂಜೇಶ್ವರ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 24 ಜೂನ್ 2023 ಶನಿವಾರದಂದು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಂಶೋಧಕಿ ಡಾ.ಲಕ್ಷ್ಮಿ ಜಿ ಪ್ರಸಾದ ನಡೆಸಲಿದ್ದು ಅಧ್ಯಕ್ಷತೆಯನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ವಹಿಸಲಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಂಶುಪಾಲ ಮಹಮದ್ ಅಲಿ ಕೆ. ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಲೇಖಕಿ H.S. ಪ್ರತಿಮಾ ಹಾಸನ್, GPMC ಯ ಹಿರಿಯ ಮೇಲ್ವಿಚಾರಕ ದಿನೇಶ್ ಕೆ, ಪ್ರಾಧ್ಯಾಪಕ ಶಿವಶಂಕರ್ ಭಾಗವಹಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ಆಯಿಷಾ ಎ.ಪೆರ್ಲ ಇವರು "ಕಾಸರಗೋಡು ಕನ್ನಡ ಹೋರಾಟ ಸಾಹಿತ್ಯ ಸಂಸ್ಕೃತಿ ಇತಿಹಾಸ" ವಿಚಾರದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ಫ್ರಾನ್ಸಿಸ್ ಕ್ಸೇವಿಯರ್ ವಹಿಸಲಿದ್ದಾರೆ. ಕವಿಗೋಷ್ಠಿಯ ಸಂಚಾಲಕ ಹಿತೇಶ್ ಕುಮಾರ್ ಭಾಗವಹಿಸಲಿದ್ದಾರೆ
ವಿವಿಧ ಕ್ಷೇತ್ರದಲ್ಲಿ ಅನುಪಮ ಸಾಧನೆಗೈದ ಸುಂದರ ಬಾರಡ್ಕ, ಕುಶಲ್ ಕುಮಾರ್ ಕೆ, ಜಗದೀಶ್ ಕೂಡ್ಲು ಇವರುಗಳು ಸನ್ಮಾನಗೊಳ್ಳಲಿದ್ದಾರೆ.
ರಾಜ್ಯದಾದ್ಯಂತ 25ಕ್ಕೂ ಹೆಚ್ಚು ಕವಿಗಳು ಭಾಗವಹಿಸಲಿದ್ದಾರೆ. ವಿದುಷಿ ಕಾವ್ಯ ಭಟ್ ಪೆರ್ಲ ಸಾರತ್ಯದ ಶಿವಾಂಜಲಿ ಕಲಾ ಕೇಂದ್ರದ ಮಕ್ಕಳಿಂದ ಜಾನಪದ, ಭರತ ನಾಟ್ಯ ಹಾಗೂ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು NSCDF ಪ್ರಧಾನ ಕಾರ್ಯದರ್ಶಿ ದಿನಕರ್ ಡಿ ಬಂಗೇರ ಮಾದ್ಯಮ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ