ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗದ ಸಹಯೋಗ: 'ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ' ಉಪನ್ಯಾಸ

Upayuktha
0

ಉಜಿರೆ: ಸಾಹಿತ್ಯದ ಮೂಲಕ ತಮ್ಮ ಧ್ವನಿಯನ್ನು ಎತ್ತಿದವರಲ್ಲಿ ಕುವೆಂಪು ಪ್ರಮುಖರು. ಆತ್ಮವನ್ನು ನಾಶಮಾಡುವ ಧಾರ್ಮಿಕ ಮೌಢ್ಯಗಳನ್ನು, ಆಚರಣೆಗಳನ್ನು ಕಟುವಾಗಿ ವಿರೋಧಿಸಿದರು. ಮೌಢ್ಯವನ್ನು ಪ್ರಶ್ನಿಸುವ ಮನೋಧರ್ಮವು ಯುವಜನರಲ್ಲಿ ಬೆಳೆಯಬೇಕಿದೆ. ಕುವೆಂಪು ಸಾಹಿತ್ಯ ಓದುಗರಲ್ಲಿ ಮಾನವೀಯತೆಯನ್ನು ಬಿತ್ತುತ್ತದೆ, ಅವರ ವಿಚಾರಧಾರೆಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿವೆ ಎಂದು ಸಂಪನ್ಮೂಲ ವ್ಯಕ್ತಿ ಡಾ. ಸುಧಾಕರ ದೇವಾಡಿಗ ಬಿ ನುಡಿದರು.


ಸ.ಪ್ರ.ದ. ಕಾಲೇಜು ಮತ್ತು ಸ್ನಾ.ಅ.ಕೇಂದ್ರ ತೆಂಕನಿಡಿಯೂರು, ಉಡುಪಿ ಕಾಲೇಜು ಸಭಾಂಗಣದಲ್ಲಿ ಎಸ್‌ಡಿಎಂ ಕಾಲೇಜು ಉಜಿರೆಯ ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುಪ್ಪಳಿ ಸಹಯೋಗದೊಂದಿಗೆ ಜರುಗಿದ 'ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ ವಿಶೇಷೋಪನ್ಯಾಸ ಮಾಲೆ' ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. 


ಕುವೆಂಪು ಸಾಹಿತ್ಯದಲ್ಲಿ ಪ್ರಕೃತಿ, ಪರಿಸರ ಎನ್ನುವುದು ಕೇವಲ ಸೌಂದರ್ಯವಾಗಿ ಕಾಣುವುದಿಲ್ಲ, ಪ್ರಕೃತಿ ಎನ್ನುವುದು ಚೈತನ್ಯ, ದೇವರ ಇರುವಿಕೆಯ ರೀತಿಯಲ್ಲಿ ಕಾಣುತ್ತದೆ. ಜೀವ ಜಗತ್ತಿನ ಕುರಿತಾದ ಚಿತ್ರಣಗಳು, ಪರಿಸರದ ಸೂಕ್ಷ್ಮತೆಗಳು ಅವರ ಕಾದಂಬರಿಯಲ್ಲಿ ಕಾಣಸಿಗುತ್ತವೆ ಎಂದು ಅಭಿಪ್ರಾಯಪಟ್ಟರು.


ಹೊಸ ತಲೆಮಾರಿಗೆ ಕುವೆಂಪು ಅವರ ಸಾಹಿತ್ಯ ಮತ್ತು ಬದುಕನ್ನು ಪರಿಚಯ ಮಾಡುವ, ಅವರ ವಿಚಾರಧಾರೆಗಳನ್ನು ಯುವ ಜನರಿಗೆ ತಿಳಿಸುವ ದೃಷ್ಟಿಕೋನದಿಂದ ಹಲವಾರು ಕಾಲೇಜುಗಳಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಕಾರ್ಯಕ್ರಮ ಸಂಯೋಜಕ ಮತ್ತು ಎಸ್‌ಡಿಎಂ ಕಾಲೇಜು ಉಜಿರೆಯ ಕನ್ನಡ ಪ್ರಾಧ್ಯಾಪಕರಾದ ಡಾ.ರಾಜಶೇಖರ ಹಳೆಮನೆ ತಿಳಿಸಿದರು. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು. ಕನ್ನಡ ವಿಭಾಗ ಮುಖ್ಯಸ್ಥ ಪೊ. ಜಯಪ್ರಕಾಶ್ ಶೆಟ್ಟಿ ಹೆಚ್. ಸ್ವಾಗತಿಸಿ, ಪ್ರಾಧ್ಯಾಪಕಿ ಭಾರತಿ ವಂದನಾರ್ಪಣೆ ಮಾಡಿದರು. ಪ್ರಾಧ್ಯಾಪಕಿ ಅರ್ಚನಾ ನಿರೂಪಿಸಿದರು. ಪ್ರಾಧ್ಯಾಪಕರಾದ ರಾಧಾಕೃಷ್ಣ, ಟಿ‌.ಜಿ.ಭಟ್, ಉಮೇಶ್ ಪೈ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top