ಮನೆಯೊಳಗೆ ಬಿದ್ದು ಮೃತಪಟ್ಟ ಮೆಸ್ಕಾಂ ಪವರ್ ಮ್ಯಾನ್ : ಮನೆಗೆ ಭೇಟಿ ನೀಡಿ ಶಾಸಕರಿಂದ ಸಾಂತ್ವನ

Upayuktha
0

ಪುತ್ತೂರು: ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ಮ್ಯಾನ್ ಮನೆಯೊಳಗೆ ಕುಸಿದು ಬಿದ್ದು ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಮೃತರ ಮನೆಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.


ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡ ಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ ಕರ್ತವ್ಯದಲ್ಲಿರುವ ಉಮೇಶ್ ಕುಂಡಕೋರಿ (42) ರವರು ಕೆಲದಿನಗಳಿಂದ ಅನಾರೋಗ್ಯ  ಪೀಡಿತರಾಗಿದ್ದು ಜೂ. 12 ರಂದು ರಾತ್ರಿ ಮನೆಯೊಳಗೆ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.


ಘಟನೆಯ ವಿಷಯ ತಿಳಿದು ಮೃತರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಕ್ಕೆ ಸಾಂತ್ವನ ಹೇಳಿದರು. ಕುಟುಂಬದ ಆಧಾರವಾಗಿದ್ದ ಉಮೇಶ್ ರವರ ಸಾವಿನಿಂದ ಕುಟುಂಬ ಕಂಗಲಾಗಿದ್ದು ಮಾನವೀಯ ನೆಲೆಯಲ್ಲಿ ಪುತ್ರನಿಗೆ ಮೆಸ್ಕಾಂ ನಲ್ಲಿ ಉದ್ಯೋಗ ಕೊಡಿಸುವಲ್ಲಿ ಅವಕಾಶಗಳಿದ್ದಲ್ಲಿ ಕೆಲಸ ಕೊಡಿಸುವುದಾಗಿ ಶಾಸಕರು ಕುಟುಂಬಕ್ಕೆ ಭರವಸೆ ನೀಡಿದರು.

ಕಾಂಗ್ರೆಸ್ ಪ್ರಮುಖರಾದ ಶಿವರಾಮ ಆಳ್ವ, ಸನತ್ ಕುರಿಯ, ನೇಮಾಕ್ಷ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top