ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರಿಗೆ ಪಕ್ಷದ ಪದಾಧಿಕಾರಿಗಳಿಂದ ಅಭಿನಂದನೆ

Upayuktha
0

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಡಿ. ವೇದವ್ಯಾಸ ಕಾಮತ್ ಅವರನ್ನು ಬಿಜೆಪಿ ಮಂಗಳೂರು ಮಂಡಲದ ವತಿಯಿಂದ ಶನಿವಾರ (ಜೂ.3) ಸನ್ಮಾನಿಸಿ ಅಭಿನಂದಿಸಲಾಯಿತು.


ನಗರದ ಕುದ್ಮುಲ್ ರಂಗರಾವ್ ಪುರವನದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರು ಅಭಿನಂದನೆ ಸ್ವೀಕರಿಸಿ ಮಾತನಾಡುತ್ತ, ಕಾರ್ಯಕರ್ತರು ಮತ್ತು ಬೆಂಬಲಿಗರ ನಿರಂತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಕಳೆದ ಐದು ವರ್ಷಗಳಲ್ಲಿ ಶಾಸಕನಾಗಿ ನಡೆಸಿದ ಅಭಿವೃದ್ಧಿ ಕಾರ್ಯಗಳು ಮತ್ತು ಜನ ಸ್ಪಂದನೆಯ ಕಾರ್ಯಗಳಿಗೆ ಮನ್ನಣೆ ನೀಡಿ ಕ್ಷೇತ್ರದ ಮತದಾರರು ಮತ್ತೊಂದು ಬಾರಿ ಜನಾದೇಶ ನೀಡಿ ಗೆಲ್ಲಿಸಿಕೊಟ್ಟಿದ್ದಾರೆ. ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಹೇಳಿದರು.


ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಗರದ ಅಭಿವೃದ್ಧಿ ಯೋಜನೆಗಳನ್ನು ಇನ್ನಷ್ಟು ಮುಂದಕ್ಕೆ ಒಯ್ಯಲು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸುವುದಾಗಿ ಶಾಸಕ ಕಾಮತ್ ಭರವಸೆ ನೀಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ರೈ ಬೊಳಿಯಾರ್‌, ವಿಧಾನ ಪರಿಷತ್ ಶಾಸಕ ಹಾಗೂ ಮಂಡಲ ಚುನಾವಣಾ ಉಸ್ತುವಾರಿ ಪ್ರತಾಪ್ ಸಿಂಹ ನಾಯಕ್‌, ಉಪ ಮೇಯರ್ ಪೂರ್ಣಿಮಾ, ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ನಿತಿನ್ ಕುಮಾರ್, ರೂಪಾ ಡಿ. ಬಂಗೇರಾ ಮತ್ತು ಸುರೇಂದ್ರ ಜೆ., ಮಂಡಲದ ಇತರ ಪದಾಧಿಕಾರಿಗಳು ಹಾಗೂ ಕಾರ್ಪೊರೇಟರ್‌ಗಳು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಬೆಂಬಲಿಗರ ನಿರಂತರ ಪರಿಶ್ರಮದಿಂದ ನಾನು ಎರಡನೇ ಬಾರಿಗೆ ಮಂಗಳೂರು ದಕ್ಷಿಣ ವೀಧಾನಸಭಾ ಕ್ಷೇತ್ರದ ಶಾಸಕನಾಗಿ ಪುನರಾಯ್ಕೆಯಾಗಲು ಸಾಧ್ಯವಾಯಿತು. ಅದರ ಜತೆಗೆ ಕಳೆದ ಐದು ವರ್ಷಗಳಲ್ಲಿ ನಮ್ಮದೇ ಸರಕಾರ ಇರುವ ಸಂದರ್ಭದಲ್ಲಿ ದಾಖಲೆ ಪ್ರಮಾಣದ ಅನುದಾನಗಳನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಮಾಡಿದ ಪ್ರಾಮಾಣಿಕ ಪ್ರಯತ್ನಗಳನ್ನು ಜನತೆ ಗುರುತಿಸಿ ಬೆಂಬಲಿಸಿರುವುದರಿಂದ ಈ ಗೆಲುವು ಸಾಧ್ಯವಾಗಿದೆ. ಕಳೆದ ಐದು ವರ್ಷಗಳಲ್ಲಿ ಶಾಸಕನಾಗಿ ನಡೆಸಿದ ಅಭಿವೃದ್ಧಿ ಕಾರ್ಯಗಳು ಮತ್ತು ಜನ ಸ್ಪಂದನೆಯ ಕಾರ್ಯಗಳಿಗೆ ಮನ್ನಣೆ ನೀಡಿ ಕ್ಷೇತ್ರದ ಮತದಾರರು ಮತ್ತೊಂದು ಬಾರಿ ಜನಾದೇಶ ನೀಡಿ ಗೆಲ್ಲಿಸಿಕೊಟ್ಟಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಗರದ ಅಭಿವೃದ್ಧಿ ಯೋಜನೆಗಳನ್ನು ಇನ್ನಷ್ಟು ಮುಂದಕ್ಕೆ ಒಯ್ಯಲು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸುತ್ತೇನೆ. ನಮ್ಮ ಎಲ್ಲ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಮತ್ತು ಸಮಸ್ತ ಮತದಾರ ಬಾಂಧವರಿಗೆ ಹೃತ್ಪೂರ್ವಕ ಕೃತಜ್ಞತೆಗಳು.

-ಡಿ. ವೇದವ್ಯಾಸ ಕಾಮತ್,

ಶಾಸಕರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top