ಮಂಗಳೂರು: ಕೆನರಾ ಹಿರಿಯ ಪ್ರಾಥಮಿಕ ಶಾಲೆ, ಉರ್ವ ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪರಿಚಯಾತ್ಮಕ ಸಭೆ (Orientation programme) ಯನ್ನು ಜೂ.5ರಂದು ಏರ್ಪಡಿಸಲಾಯಿತು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಅರುಣಾ ಶೆಣೈ ನಿರೂಪಿಸಿದರು. ಶಿಕ್ಷಕಿ ಸೌಮ್ಯ ಪಡಿಯಾರ್ ನೆರೆದವರೆಲ್ಲರನ್ನು ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಲಲನ.ಜೆ. ಶೆಣೈ ಅವರು ಶಾಲೆಯ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು.
ಶಿಕ್ಷಕಿಯರಾದ ಗೀತಾಂಜಲಿ ಹಾಗೂ ಶಿಲ್ಪ ಆಚಾರ್ಯ ಅವರು ಶಾಲಾ ನೀತಿ ನಿಯಮಗಳನ್ನು ವಾಚಿಸಿದರು. ಕೆನರಾ ಆಡಳಿತ ಮಂಡಳಿಯ ಗೌರವಾನ್ವಿತ ಕಾರ್ಯದರ್ಶಿಗಳಾದ ಎಂ. ರಂಗನಾಥ್ ಭಟ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳಲ್ಲಿ ಓದುವ ಕೌಶಲ, ಸಂವಹನ ಕೌಶಲ್ಯಗಳನ್ನು ಬೆಳೆಸುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸಿದರು. ಶಾಲಾ ಪ್ರಬಂಧಕರಾದ ಶ್ರೀ ಯೋಗೇಶ್ ಆರ್ ಕಾಮತ್ ಅವರು ಉಪಸ್ಥಿತರಿದ್ದರು. ಶಿಕ್ಷಕಿ ಮಮತಾ, ಆರ್.ಪೈ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


