ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ "ಟೆಕ್ ಯುವ - 23" ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಜೂನ್ 22ರಂದು ನಡೆಯಿತು.
ಅಮೇರಿಕಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಮತ್ತು ಕಿಲ್ಬಿ ಲ್ಯಾಬ್ ಇದರ ತಾಂತ್ರಿಕ ವಿಭಾಗದ ಸದಸ್ಯರು ಹಾಗೂ ಕರ್ನಾಟಕ ಮೈಕ್ರೋ ಇಲೆಕ್ಟ್ರೋನಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಮತ್ತು ನಿರ್ದೇಶಕರಾದ ಶ್ರೀ ರತ್ನಾಕರ್ ಎಸ್. ಭಟ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಾಯೋಗಿಕಕಾತ್ಮಕ ತರಬೇತಿಯನ್ನು ಪ್ರತೀ ವಿದ್ಯಾರ್ಥಿಗಳು ಪಡೆಯಬೇಕು. ಅಂತಹ ಶಿಕ್ಷಣ ಶ್ರೀನಿವಾಸ ಕಾಲೇಜಿನಲ್ಲಿ ಸಿಗುತ್ತಿದೆ. ಎಲ್ಲರೂ ಈ ರೀತಿಯ ಶಿಕ್ಷಣವನ್ನು ಪಡೆದುಕೊಂಡು ಮುಂದುವರೆಯಬೇಕು ಎಂದು ಹೇಳಿದರು.
ಶ್ರೀನಿವಾಸ ವಿಶ್ವವಿದ್ಯಾಲಯದ ಮಾನ್ಯ ಸಹ ಕುಲಾಧಿಪತಿ ಹಾಗೂ ಎ. ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರಾದ ಡಾ. ಎ. ಶ್ರೀನಿವಾಸ್ ರಾವ್ ಮಾತನಾಡಿ, ಸ್ಪರ್ಧೆ ಅನ್ನುವುದು ಆರೋಗ್ಯಕರವಾಗಿದ್ದಾಗಲೇ ಶಿಕ್ಷಣಕ್ಕೊಂದು ಅರ್ಥ.ಯುವಜನತೆ ಹೊಸತನದ ಜತೆ ತಂತ್ರಜ್ಞಾನಿಕವಾಗಿ ಕಲಿಯುವುದನ್ನು ರೂಢಿ ಮಾಡಿಕೊಂಡರೆ ಖಂಡಿತಾ ಭವಿಷ್ಯದ ದಿನಗಳಲ್ಲಿ ಉತ್ತಮ ಜೀವನವನ್ನು ಪಡೆಯಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ. ಎ. ರಾಘವೇಂದ್ರ ರಾವ್ ಮಾತನಾಡಿ, ಕೌಶಲ್ಯಾಧಾರಿತ ಶಿಕ್ಷಣವನ್ನು ಪಡೆದರೆ ಅದೇ ನಿಜವಾದ ಶಿಕ್ಷಣ. ಇದುವೇ ನಮ್ಮ ಭವಿಷ್ಯದ ಅಭಿವೃದ್ಧಿಗೆ ಮೂಲ ತಳಹದಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ದ್ವಿತೀಯ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ತಯಾರಾದ ಕಾಲೇಜಿನ ನೂತನ ವೆಬ್ಸೈಟನ್ನು ಬಿಡುಗಡೆಮಾಡಲಾಯಿತು.
ಶ್ರೀನಿವಾಸ ವಿವಿ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್, ಶ್ರೀನಿವಾಸ ವಿಶ್ವವಿದ್ಯಾಲಯದ ಡಿಜಿಟಲೀಕರಣ ವಿಭಾಗದ ಮುಖ್ಯಸ್ಥರಾದ ಡಾ. ಸುಷ್ಮಾ ಕೇಸರಿ, ಅಸೋಸಿಯೇಟ್ ಡೀನ್ ಡಾ. ನೇತ್ರಾವತಿ ಪಿ. ಎಸ್., ಟೆಕ್ ಯುವ ಕಾರ್ಯಕ್ರಮದ ಸಂಚಾಲಕರಾದ ಪ್ರೊ. ಕೆ. ಶ್ರೀನಾಥ್ ರಾವ್, ಟೆಕ್ ಯುವ-23 ರ ವಿದ್ಯಾರ್ಥಿ ಸಮನ್ವಯಕಾರರಾದ ಶ್ರೀ ರೋಷನ್ ರಾಕೇಶ್ ನಾಯರ್ ಮತ್ತು ಕುಮಾರಿ ವೈಷ್ಣವಿ ಶಣೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥರಾದ ಡಾ. ಥಾಮಸ್ ಪಿಂಟೋ ಸ್ವಾಗತಿಸಿ, ಪ್ರೊ. ಶ್ವೇತಾ ಪೈ ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಶ್ರೀಜಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ವಿವಿಧ ಇಂಜಿನಿಯರಿಂಗ್ ಕಾಲೇಜುಗಳಿಂದ ಆಗಮಿಸಿದ ಸ್ಪರ್ಧಾಳುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುಮಾರು 1,400 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಎರಡು ದಿನಗಳ ಕಾಲ ನಡೆಯಲಿರುವ ಟೆಕ್ ಯುವ 23 ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ