ವಿವಿ ಸಂಧ್ಯಾ ಕಾಲೇಜು: ತುಳು ಪುಸ್ತಕ ಬಿಡುಗಡೆ, ಯಕ್ಷಗಾನ ಪ್ರದರ್ಶನ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ  ಕಾಲೇಜು, ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ, ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ (NYT), ವಂಡಾರು ಇವರ ಸಂಯುಕ್ತ ಆಶ್ರಯದಲ್ಲಿ ʼಗೇನದ ಗೆಜ್ಜೆ- ನೂದನೆ ಪಜ್ಜೆʼ, ʼತ್ರಿಂಶತಿ ತಿರುಳುʼ ಮತ್ತು ʼಅಪ್ಪೆ ಅಂಜನೆʼ ಪುಸ್ತಕಗಳ ಬಿಡುಗಡೆ ಮತ್ತು ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ಮೇಳದ ʼಅಪ್ಪೆ ಅಂಜನೆʼ ತುಳು ಯಕ್ಷಗಾನ ಪ್ರಸಂಗಗಳ ಪ್ರದರ್ಶನವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜೂನ್ 1 (ಗುರುವಾರ) ಸಂಜೆ ಆಯೋಜಿಸಲಾಗಿತ್ತು. 


ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ಅಧ್ಯಕ್ಷತೆ ವಹಿಸಿ ಕೃತಿಗಳ ಲೋಕಾರ್ಪಣೆ ಮಾಡಿದರು. ವಿವಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಲಕ್ಷ್ಮೀದೇವಿ ಎಲ್, ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ಸ್ಥಾಪಕಾಧ್ಯಕ್ಷ ಗೋವಿಂದ ವಂಡಾರು, ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ಮೇಳದ ವ್ಯವಸ್ಥಾಪಕ ಸುರೇಂದ್ರ ಮಲ್ಲಿ ಮೊದಲಾದವರು ಉಪಸ್ಥಿತರಿದ್ದರು ಎಂದು ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top