ಮಂಗಳೂರು ವಿಶ್ವವಿದ್ಯಾಲಯ ಅಂತರಕಾಲೇಜು ವೇಟ್‍ಲಿಫ್ಟಿಂಗ್ ಚಾಂಪಿಯನ್ ಶಿಪ್
ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್ ಕಾಲೇಜು ಕೃಷಿಸಿರಿ ವೇದಿಕೆಯಲ್ಲಿ ಹಮ್ಮಿಕೊಂಡ ‘ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ವೇಟ್‍ಲಿಫ್ಟಿಂಗ್ ಚಾಂಪಿಯನ್ ಶಿಪ್ 2022-23’ರ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ದೇಶದಲ್ಲಿ ಕ್ರೀಡಾ ಕ್ಷೇತ್ರವು ಇತರ ಕ್ಷೇತ್ರಗಳಂತೆ ಅಭಿವೃದ್ಧಿ ಹೊಂದುತ್ತಿದೆ. ಕ್ರೀಡೆಯಲ್ಲಿ ಸ್ಪೂರ್ತಿಯಲ್ಲಿ ಭಾಗವಿಸಬೇಕು. ಗೆಲ್ಲಲು ಬೇರೆ ಮಾರ್ಗಗಳನ್ನು ಹುಡುಕಬಾರದು. ಕ್ರೀಡಾ ಕ್ಷೇತ್ರದಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು’ ಎಂದರು.
ಮಾಜಿ ಸಚಿವ ಅಭಯ ಚಂದ್ರ ಜೈನ್ ಮಾತನಾಡಿ, ಭಾರತದ ಕ್ರೀಡಾಪಟುಗಳು ಸಾಧನೆ ಮಾಡುತ್ತಿದ್ದಾರೆ. ಇನ್ನಿತರ ಕ್ರೀಡೆಗಳಿಗೆ ಹೋಲಿಸಿದರೆ ವೇಟ್‍ಲಿಫ್ಟಿಂಗ್‍ಗೆ ಅಭಿಮಾನಿಗಳ ಸಂಖ್ಯೆ ಕಡಿಮೆ ಇದೆ’ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ 200ಕ್ಕೂ ಅಧಿಕ ಕಾಲೇಜು, ಲಕ್ಷಕ್ಕಿಂತ ಹೆಚ್ಚು ಮಕ್ಕಳಿದ್ದಾರೆ. ಆದರೆ, ವೇಟ್‍ಲಿಫ್ಟಿಂಗ್‍ನಲ್ಲಿ ಭಾಗವಹಿಸುವ ಮಕ್ಕಳ ಸಂಖ್ಯೆ ಬೆರಳೆಣಿಕೆಯಷ್ಟು. ಪ್ರತಿಯೊಬ್ಬರು ಕ್ರೀಡೆಯನ್ನು ಅವಿಭಾಜ್ಯ ಅಂಗವಾಗಿ ಬೆಳೆಸಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಬರುವಂತೆ ಮಾಡಬೇಕು’ ಎಂದರು
ಮಂಗಳೂರು ವಿಶ್ವವಿದ್ಯಾಲಯ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಹರಿದಾಸ್ ಕೂಳೂರು, ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರು, ತೀರ್ಪುಗಾರರು ಇದ್ದರು.
ತರಬೇತುದಾರ ಪ್ರಮೋದ್ ಕುಮಾರ್ ಸ್ವಾಗತಿಸಿ, ಆಳ್ವಾಸ್ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೀಶ ಕೈರೋಡಿ ನಿರೂಪಿಸಿ, ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ