ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾನವಪ್ರಜ್ಞೆ ಹಾಗೂ ಯೋಗವಿಜ್ಞಾನ ವಿಭಾಗವು, ವಿಶ್ವವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಖಾತ್ರಿಕೋಶ (ಐಕ್ಯೂಎಸಿ) ಸಹಯೋಗದೊಂದಿಗೆ, '9 ನೇ ಅಂತಾರಾಷ್ಟ್ರೀಯ ಯೋಗ' ದಿನವನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜೂನ್ 21 ರಂದು ಬೆಳಗ್ಗೆ 8.30 ಕ್ಕೆ ಆಯೋಜಿಸಿದೆ.
ಮಂಗಳೂರಿನ ಕಸ್ತೂರ್ ಬಾ ವೈದ್ಯಕೀಯ ಕಾಲೇಜಿನ ವಿಕಿರಣಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ವಿನಯಪೂರ್ಣಿಮಾ ಮುಖ್ಯ ಅತಿಥಿಯಾಗಿರಲಿದ್ದಾರೆ. ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಾಮೂಹಿಕ ಯೋಗಾಭ್ಯಾಸ ನಡೆಯಲಿದೆ, ಎಂದು ವಿಭಾಗದ ಸಂಯೋಜಕ ಡಾ. ಕೇಶವಮೂರ್ತಿ ಟಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ