ಮಾದಕ ವ್ಯಸನಿಗಳನ್ನು ಗುರುತಿಸಿ, ಚಿಕಿತ್ಸೆ ಕೊಡಿಸಬೇಕು: ಕೆ.ಇ ಪ್ರಕಾಶ್

Upayuktha
0

ಮಂಗಳೂರು: ಮಾದಕ ವಸ್ತುಗಳಿಂದ ದೂರವಿದ್ದು, ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಾದಕ ವ್ಯಸನಿಗಳನ್ನು ಗುರುತಿಸಿ, ಅವರನ್ನು ವ್ಯಸನ ಮುಕ್ತರನ್ನಾಗಿ ಮಾಡಬೇಕು ಎಂದು ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಪ್ರಾಂಶುಪಾಲ ಕೆ.ಇ ಪ್ರಕಾಶ್ ಅವರು ಅಭಿಪ್ರಾಯಪಟ್ಟರು.


ಅವರು ಜೂ.28ರ ಬುಧವಾರ ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೆಮಿನಾರ್ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ “ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಾದಕವಸ್ತು ವ್ಯಸನದ ಸಮಸ್ಯೆ ವಿಶ್ವದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತಿದೆ, ಇದು ವಿದ್ಯಾರ್ಥಿ ಸೇರಿದಂತೆ ಯುವ ಸಮುದಾಯವನ್ನು ಗುರಿಯನ್ನಾಗಿಸಲಾಗಿದೆ ಆದ ಕಾರಣ ಈ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸುವುದರ ಜತೆಗೆ ದುಶ್ಚಟಕ್ಕೆ ಬಲಿಯಾಗದಂತೆ ಮತ್ತು ಬಲಿಯಾದವರ ಚಿಕಿತ್ಸೆಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಕೆ.ಎಂ.ಸಿಯ ಮನೋರೋಗ ವಿಭಾಗದ ಸಹಪ್ರಾಧ್ಯಾಪಕಿ ಡಾ. ಶರಣ್ಯ ಬಿ. ಶೆಟ್ಟಿ, ಮನೋರೋಗ ತಜ್ಞರಾದ ಡಾ. ಸುಪ್ರೀತಾ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.


ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಸ್ವಾಗತಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಲ್ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top