KGTTI ಜೊತೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು ಒಡಂಬಡಿಕೆ

Upayuktha
0


ಮಿಜಾರು:
ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು (ಎಐಇಟಿ) ಈಚೆಗೆ ಒಡಂಬಡಿಕೆಗೆ ಸಹಿ ಮಾಡಿದೆ.

ವಿವಿಧ ತರಬೇತಿ ಕಾರ್ಯಕ್ರಮಗಳ ಅಡಿಯಲ್ಲಿ ಕೌಶಲ ಅಭಿವೃದ್ಧಿ ತರಬೇತಿಯನ್ನು ನೀಡಲು ಈ ಒಪ್ಪಂದವನ್ನು ಮಾಡಲಾಗಿದೆ. ಯುವಕರ ಎಂಜಿನಿಯರಿಂಗ್ ಕೌಶಲಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವ ಆಶಯವನ್ನು ಈ ಒಪ್ಪಂದ ಒಳಗೊಂಡಿದೆ.

ಕೆಜಿಟಿಟಿಐ ಮಂಗಳೂರಿನ ನಿರ್ದೇಶಕ ಗಿರಿಧರ್ ಸಾಲಿಯಾನ್ ಅವರ ಸಮ್ಮುಖದಲ್ಲಿ ಈ ತಿಳಿವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ  ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಮತ್ತು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ,  ಸಹಾಯಕ ಪ್ರಾದ್ಯಾಪಕ  ಹೇಮಂತ್ ಸುವರ್ಣ ಇದ್ದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
To Top