ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಗೆ ಬಂಟರ ಸಂಘಗಳ ವತಿಯಿಂದ ಸನ್ಮಾನ, ಅಭಿನಂದನೆ

Upayuktha
0

ಪುತ್ತೂರು: ವಿವಿಧ ಬಂಟರ ಸಂಘಗಳ ವತಿಯಿಂದ ಇಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಮತ್ತು ಸನ್ಮಾನ ಸಮಾರಂಭ ನಡೆಯಿತು.


ಈ ಸಂದರ್ಭ ಮಾತನಾಡಿದ ಅವರು, ಇಂದು ನಾನು ಶಾಸಕನಾಗಲು ಬಂಟ ಸಮುದಾಯ ಸಂಪೂರ್ಣ ಆಶೀರ್ವಾದ ದೊರಕಿದ್ದು, ಇತರ ಸಮುದಾಯದವರಿಗೆ ಸ್ಪಂದನೆ ನೀಡುವ ಜತೆಗೆ ಒಂದಲ್ಲಾ ಒಂದು ದಿನ ಬಂಟ ಸಮುದಾಯದ ಖ್ಯಾತಿಯನ್ನು ಮತ್ತಷ್ಟು ಎತ್ತರಕ್ಕೆ ಏರಿಸುತ್ತೇನೆ. ಈ ನಿಟ್ಟಿನಲ್ಲಿ ಸರಕಾರದಿಂದ ಬರುವ ಅನುದಾನವನ್ನು ಪ್ರಾಮಾಣಿಕವಾಗಿ ಬಳಸಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.


ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ಬಂಟರ ಭವನದಲ್ಲಿ ಭಾನುವಾರ ನಡೆದ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಶಾಸಕ ಅಶೋಕ್‌ ಕುಮಾರ್ ರೈ, ಪತ್ನಿ ಸುಮಾ ಎಸ್. ರೈ ಹಾಗೂ ಇಬ್ಬರು ಪುತ್ರಿಯರು, ಓರ್ವ ಪುತ್ರರ ಜತೆಯಾಗಿ ಶಾಲು ಹೊದಿಸಿ, ಫಲಪುಷ್ಪ ನೀಡಿ, 5.6 ಅಡಿ ಎತ್ತರದ ಸನ್ಮಾನ ಪತ್ರ ನೀಡಿ ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಬಂಟ ಸಮಾಜದಿಂದ ಅತೀ ಹೆಚ್ಚು ಅಂಕ ಪಡೆದವರನ್ನು ಗೌರವಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇದೇ ಸಂದರ್ಭದಲ್ಲಿ ಜುಲೈ21 ರಂದು ಪುತ್ತೂರಿನಲ್ಲಿ ನಡೆಯುವ ತುಳುವರ ಬಂಟರ ಪರ್ಬ-2023 ಲೋಗೋವನ್ನು ಶಾಸಕ ಅಶೋಕ್ ಕುಮಾರ್ ರೈ ಅನಾವರಣಗೊಳಿಸಿದರು.


ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ ಅಭಿನಂದನಾ ಪತ್ರ ವಾಚಿಸಿದರು. ರೂಪರೇಖಾ ಆಳ್ವ ಪ್ರತಿಭಾ ಪುರಸ್ಕಾರ ಪಟ್ಟಿ ವಾಚಿಸಿದರು. ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಸ್ವಾಗತಿಸಿದರು. ನಿರಂಜನ ರೈ ಮಠಂತಬೆಟ್ಟು, ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ಅಭಿನಂದನಾ ಸಮಾರಂಭದ ಮೊದಲು ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top