ಪುತ್ತೂರು: ಬಂಟ್ವಾಳ ತಾಲೂಕು ವ್ಯಾಪ್ತಿಯ ಅಳಕೆ ಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಗತವರ್ಷದಲ್ಲಿ 6ನೇ ತರಗತಿ ಪ್ರಾರಂಭ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈಯವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜೂ. 22 ರಂದು ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.
ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಯು 1ನೇ ತರಗತಿಯಿಂದ 5 ನೇ ತರಗತಿಯವರೆಗೆ ನಡೆಯುತ್ತಿದ್ದು, ಒಟ್ಟು 133 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ 6ನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ಸುಮಾರು 3 ಕಿ.ಮೀ ದೂರವಿರುವ ಮಿತ್ತೂರು, ಕಬಕ, ಓಜಾಲ ಶಾಲೆಗಳಿಗೆ ಹೋಗಬೇಕಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಎಸ್.ಡಿ.ಎಂ.ಸಿ ಸಭೆಯಲ್ಲಿ ಚರ್ಚಿಸಿ 2023-24ನೇ ಸಾಲಿನಲ್ಲಿ 6ನೇ ತರಗತಿಗೆ ಉನ್ನತೀಕರಿಸಲು ನಿರ್ಣಯ ಕೈಗೊಂಡು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಮಂಗಳೂರಿನ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಈ ಶಾಲೆಯನ್ನು 6ನೇ ತರಗತಿಗೆ ಉನ್ನತೀಕರಿಸಬಹುದೆಂದು ತಮ್ಮ ಅಭಿಪ್ರಾಯದೊಂದಿಗೆ ಅನುಮತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗತ ವರ್ಷದಿಂದಲೇ 6ನೇ ತರಗತಿ ಆರಂಭ ಮಾಡುವಂತೆ ಇಲಾಖೆಗೆ ಆದೇಶ ನೀಡುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ







