ಸುದಾನ ಶಾಲೆಯಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Upayuktha
0

ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಜೂನ್ 12ರಂದು ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಯನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ. ಶೋಭಾನಾಗರಾಜ್ ರವರು “ವಿದ್ಯಾರ್ಥಿ ಜೀವನದಲ್ಲಿ ಸಿಗುವ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ತೊಡಗಿಸಿಕೊಳ್ಳಬೇಕು, ವೈಯಕ್ತಿಕ ಶಿಸ್ತನ್ನು ಪಾಲಿಸುತ್ತಾ ಉತ್ತಮ ಪ್ರಜೆಯಾಗಬೇಕು” ಎಂದು ಕರೆನೀಡಿದರು.


ಈ ಸಂದರ್ಭದಲ್ಲಿ ಹೊಸದಾಗಿ ಸೇರಿದ ವಿದ್ಯಾರ್ಥಿಗಳು ನೃತ್ಯ, ಸಂಗೀತ, ಮಿಮಿಕ್ರಿ, ಚಿತ್ರಕಲೆ, ಏಕಪಾತ್ರಾಭಿನಯ ಮುಂತಾದ ವೈವಿಧ್ಯಮಯ ಪ್ರತಿಭೆಯ ಪ್ರದರ್ಶನದಿಂದ ಎಲ್ಲರನ್ನೂ ರಂಜಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಲಿತ ಕಲಾಸಂಘದ ನಿರ್ದೇಶಕಿ ಶ್ರೀಮತಿ. ಬಕುಲ ರವರು ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ. ಹೇಮಲತ ದಾಖಲಿಸಿದರು. ಶಾಲೆಯ ಲಲಿತ ಕಲಾಸಂಘವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top