ಪುತ್ತೂರು: ನಗರದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಯಶಸ್ವಿಯಾಗಿ ನಡೆಯುತ್ತಿದ್ದು ದೇಶಾದ್ಯಂತ ಶಾಖೆಯನ್ನು ಹೊಂದಿರುವ ಶಾಹಿ ಎಕ್ಸ್‌ಪೋರ್ಟ್ಸ್ ಕಂಪೆನಿಯು ಕಾಲೇಜಿಗೆ ಭೇಟಿ ನೀಡಿತ್ತು.
ವಿಶೇಷವಾಗಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಅಲ್ಲದೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಬೆಂಜನ ಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದರು. ವಾರ್ಷಿಕ 4.5 ಲಕ್ಷ ವೇತನವನ್ನು ನೀಡುವ ಹುದ್ದೆಗೆ ನೇಮಕಾತಿಯು ನಡೆದಿದೆ. ನೇಮಕಾತಿ ಪ್ರಕ್ರಿಯೆಯ ಒಟ್ಟು ಮೂರು ಸುತ್ತುಗಳು ಪೂರ್ಣಗೊಂಡಿದ್ದು ಅಂತಿಮ ಸುತ್ತಿಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ 8 ವಿದ್ಯಾರ್ಥಿಗಳ ಸಹಿತ 14 ಜನ ಆಯ್ಕೆಯಾಗಿದ್ದಾರೆ. ಅಂತಿಮ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.
ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಅವಿರತವಾಗಿ ಶ್ರಮಿಸುತ್ತಿದ್ದು ಇನ್ನೂ ಹೆಚ್ಚಿನ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


