ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ
ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ. ವ್ಯಕ್ತಿತ್ವವೆಂಬುದು ಹುಟ್ಟಿನಿಂದ ಸಾವಿನವರೆಗೆ ರೂಪುಗೊಳ್ಳುತ್ತಿರುತ್ತದೆ. ಇದರಲ್ಲಿ ಉತ್ತಮ ಸಂಸ್ಕೃತಿ - ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು. ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಬೆಳೆಸಿಕೊಂಡಾಗ ನಾವು ಹೃದಯವಂತರಾಗಬಹುದು. ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಆರಂಭಿಸುವುದು ಯಶಸ್ಸಿನ ಹಾದಿಯಲ್ಲಿ ಸಾಗುವ ಮೊದಲ ಹೆಜ್ಜೆ. ಜೀವನದಲ್ಲಿಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ.ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ.ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು. ಸಾಮಾಜಿಕ ಜಾಗೃತಿಯ ಬಗ್ಗೆ ಮತ್ತು ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ನಿಭಾಯಿಸಬೇಕಾದ ರೀತಿಯ ಬಗ್ಗೆ ಇದೇ ಸಂದರ್ಭದಲ್ಲಿ ತಿಳಿಸಿಕೊಟ್ಟರು. ಉಪನ್ಯಾಸಕಿ ಕವಿತಾ ಮತ್ತು ರಂಜಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಂಜನಾ ಭಟ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ