ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಸಂಘದ ವತಿಯಿಂದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಹಾಗೂ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ನ ನಿರ್ದೇಶಕ ಡಾ. ಶ್ರೀಶ ಭಟ್ ಮತ್ತು ತಂಡದ ಸದಸ್ಯರಾದ ಶ್ರದ್ಧಾ ಭಟ್, ನಿತ್ಯಶ್ರೀ, ಸೌಜನ್ಯ, ಸುಹಾಸ್, ಸೋನಾಲ್ ಇವರಿಂದ SWOT ವಿಶ್ಲೇಷಣೆ, ಹಾಕಥಾನ್ ಎಂಬ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಮ್ಮಲ್ಲಿರುವ ಸಾಮರ್ಥ್ಯ ಹಾಗೂ ದೌರ್ಬಲ್ಯಗಳನ್ನು ಗುರುತಿಸಲು ಸಹಾಯ ಮಾಡುವ ಸರಳ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹ ಸಂಯೋಜಕಿ ಭಾಗ್ಯಶ್ರೀ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಶ್ಮಿತಾ ಸ್ವಾಗತಿಸಿ ವಂದಿಸಿದರು. ವಿದ್ಯಾರ್ಥಿನಿ ಸಂಸ್ಕೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ