ಜೀವನದಲ್ಲಿ ಪ್ರಶ್ನಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು: ಡಾ. ಪಿ. ಈಶ್ವರ ಭಟ್

Upayuktha
0

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆಯ

ಪುತ್ತೂರು: ಜೀವನದಲ್ಲಿ ಪ್ರಶ್ನಿಸುವ ಮನೋಭಾವನೆಯೊಂದಿಗೆ ತಾಳ್ಮೆಯನ್ನು ಬೆಳೆಸಿಕೊಂಡಾಗ ಜ್ಞಾನ ವೃದ್ಧಿಯಾಗುತ್ತದೆ. ವಿಷಯವನ್ನು ಆಳವಾಗಿ ವಿಶ್ಲೇಷಿಸುವ ಮೂಲಕ ಸರಿ ತಪ್ಪಿನ ಅರಿವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪ್ರಶ್ನಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು. ಪ್ರಶ್ನೆಯಿಂದ ಉತ್ತರ, ಉತ್ತರದಿಂದ ಪ್ರಶ್ನೆ ಹೀಗೆ ವಿದ್ಯೆ ಸಂಚರಿಸುತ್ತಿರಬೇಕು ಎಂದು ಹಿರಿಯ ವಿದ್ಯಾರ್ಥಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿಯ ವಿಶ್ರಾಂತ ಕುಲಪತಿ ಡಾ. ಪಿ. ಈಶ್ವರ ಭಟ್ ಹೇಳಿದರು. 


ಇವರು ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ವಿವೇಕಾನಂದ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ(ರಿ), ಮತ್ತು ಐಕ್ಯೂಎಸಿ ಘಟಕ ಇದರ ಸಹಯೋಗದಲ್ಲಿ ನಡೆದ ಅಂತಿಮ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆಯ ಮುಖ್ಯ ಅತಿಥಿಯಾಗಿ ಮಾತನಾಡಿದರು. 


ನಾವು ಕಲಿಯುವ ವಿದ್ಯೆ ಕ್ರಮಬದ್ಧವಾಗಿರಬೇಕು, ಅದು ನಮ್ಮ ಬದುಕಿಗೆ ಆಧಾರವಾಗುತ್ತದೆ. ಸಾಧಿಸಿದರೆ ಸಬಲವನ್ನೂ ನುಂಗಬಹುದು ಎಂಬ ಮಾತಿನಂತೆ ಜೀವನದಲ್ಲಿ ಯಶಸ್ಸು ಗಳಿಸಲು ನಿರಂತರ ಪ್ರಯತ್ನ ಹಾಗೂ ಗುರಿ ಬಹಳ ಮುಖ್ಯ. ಪ್ರಯತ್ನಿಸಿ ಸೋಲುವುದರಿಂದ ನಮ್ಮ ತಪ್ಪಿನ ಅರಿವಾಗುತ್ತದೆ. ಸೋತಾಗ ಕುಗ್ಗದೆ ಪ್ರಯತ್ನ ಮುಂದುವರೆಸಿ ಜೀವನದಲ್ಲಿ ಸಾರ್ಥಕತೆಯನ್ನು ಕಾಣಬೇಕು ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಶಿಕ್ಷಣ ಸಂಸ್ಥೆಗೆ ಹಿರಿಯ ವಿದ್ಯಾರ್ಥಿಗಳೇ ಆಸ್ತಿ. ಸಂಸ್ಥೆ ಹೇಳಿಕೊಟ್ಟ ವಿಚಾರಗಳನ್ನು ಅರಿತುಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಈ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದರು. 


ಈ ಸಂದರ್ಭದಲ್ಲಿ ಸಂಸ್ಕೃತ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಅಚ್ಚುತ ಭಟ್, ರಸಾಯನ ಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಜೆ ಸುಂದರ ಭಟ್, ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ವಿ. ಬಿ. ಅರ್ತಿಕಜೆ, ವಿಶ್ರಾಂತ ಕುಲಪತಿ ಡಾ. ಪಿ. ಈಶ್ವರ್ ಭಟ್ ಹಾಗೂ ಹಳೆ ವಿದ್ಯಾರ್ಥಿ ಡಾ. ವೇಣುಗೋಪಾಲ ಶರ್ಮ ಇವರ ಸಾಧನೆಯನ್ನು ಗುರುತಿಸಿ ಗೌರವಿಸಲಾಯಿತು. 


ವಿಶ್ವವಿದ್ಯಾನಿಲಯ ಮಟ್ಟದಲ್ಲಿ ರಾಂಕ್, ಚಿನ್ನದ ಪದಕ ಮತ್ತು ನಗದು ಪುರಸ್ಕಾರಕ್ಕೆ ಭಾಜನರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ದೀಪವನ್ನು ಹಸ್ತಾಂತರಿಸಿದರು. 


ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್ ಪಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮನಮೋಹನ ಯಂ, ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳೀಕೃಷ್ಣ ಕೆ ಎನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಕಾರ್ಯಕ್ರಮವನ್ನು ಸ್ವಾಗತಿಸಿ, ಪರೀಕ್ಷಾಂಗ ಕುಲಸಚಿವ ಡಾ. ಹೆಚ್. ಜಿ ಶ್ರೀಧರ್ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಗೀತಾ ಕುಮಾರಿ ಹಾಗೂ ಡಾ. ಮೈತ್ರಿ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top